Ind vs Eng: ದಾಖಲೆ ಬರೆದ ಜೈಸ್ವಾಲ್‌ ; ಉತ್ತಮ ಸ್ಥಿತಿಯಲ್ಲಿ ಭಾರತ

ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಟೆಸ್ಟ್‌ನ ಮೊದಲ ದಿನ ಭಾರತ ಉತ್ತಮ ಸ್ಥಿತಿಯಲ್ಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 336 ರನ್ ಕಲೆಹಾಕಿತು.

ವಿಶಾಖಪಟ್ಟಣದ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಜೈಸ್ವಾಲ್ ಅಮೋಘ ಪ್ರದರ್ಶನ ನೀಡಿದರು. ಬೆಳಿಗ್ಗೆಯಿಂದ ಸಂಜೆಯವರೆಗೂ ಕ್ರೀಸ್‌ನಲ್ಲಿ ಕಚ್ಚಿನಿಂತು ಆಡಿದ ಜೈಸ್ವಾಲ್ ಇಂಗ್ಲೆಂಡ್‌ ಬೌಲಿಂಗ್ ಪಡೆಯನ್ನು ಸಮರ್ಥವಾಗಿ ಎದುರಿಸಿದರು.

Yashasvi Jaiswal Shines with Unbeaten 179; India Ends Day 1 at 336/6 in 2nd Test against England

ಜೈಸ್ವಾಲ್ 257 ಎಸೆತಗಳಲ್ಲಿ 17 ಬೌಂಡರಿ, 5 ಸಿಕ್ಸರ್ ಸಹಿತ ಅಜೇಯ 179 ರನ್ ಗಳಿಸಿರುವ ಯಶಸ್ವಿ ಜೈಸ್ವಾಲ್ ಎರಡನೇ ದಿನಕ್ಕೆ ವಿಕೆಟ್ ಉಳಿಸಿಕೊಂಡಿದ್ದಾರೆ. ಅವರಿಂದ ಮೊದಲ ದ್ವಿಶತಕ ಬರಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಇದು ಅವರ ಎರಡನೇ ಟೆಸ್ಟ್ ಶತಕವಾಗಿದೆ.

2011ರ ಬಳಿಕ ಭಾರತದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ದಿನ ಅತಿ ಹೆಚ್ಚು ರನ್ ಸಿಡಿಸಿದ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಬರೆದಿದ್ದಾರೆ. 2016ರಲ್ಲಿ ಚೆನ್ನೈನಲ್ಲಿ ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧ 232 ರನ್ ಗಳಿಸಿದ್ದು ದಾಖಲೆಯಾಗಿದೆ. ಒಟ್ಟಾರೆ ಭಾರತಕ್ಕಾಗಿ ಮೊದಲನೇ ದಿನ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಜೈಸ್ವಾಲ್ ಸ್ಥಾನ ಪಡೆದುಕೊಂಡಿದ್ದಾರೆ.

ಮತ್ತೆ ಅದೇ ತಪ್ಪು ಮಾಡಿದ ಬ್ಯಾಟಿಂಗ್ ಪಡೆ

ಯಶಸ್ವಿ ಜೈಸ್ವಾಲ್ ಅವರನ್ನು ಹೊರತುಪಡಿಸಿ ಉಳಿದ ಬ್ಯಾಟರ್ ಗಳು ದೊಡ್ಡ ಮೊತ್ತ ಗಳಿಸಲು ವಿಫಲವಾದರು. ಮೊದಲ ಪಂದ್ಯವನ್ನಾಡುತ್ತಿರುವ ರಜತ್ ಪಾಟಿದಾರ್ 32, ಶುಭಮನ್ ಗಿಲ್ 34 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ.

ನಾಯಕ ರೋಹಿತ್ ಶರ್ಮಾ 14 ರನ್ ಗಳಿಸಿ ಔಟಾದರೆ. ಶ್ರೇಯಸ್ ಅಯ್ಯರ್ 27 ರನ್ ಗಳಿಸಿದರು. ಅಕ್ಷರ್ ಪಟೇಲ್ 27 ರನ್ ರನ್ ಗಳಿಸಿದರೆ, ದಿನಾದಟ ಕೊನೆಯಾಗಲು ಕೆಲವು ಓವರ್ ಬಾಕಿ ಇರುವಾಗ ಉತ್ತಮವಾಗಿ ಆಡುತ್ತಿದ್ದ ಕೆಎಸ್ ಭರತ್ 17 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ರವಿಚಂದ್ರನ್ ಅಶ್ವಿನ್ ದಿನಾದಂತ್ಯದಲ್ಲಿ ಅಜೇಯ 5 ರನ್ ಗಳಿಸಿದ್ದು, ಜೈಸ್ವಾಲ್ ಜೊತೆ ಎರಡನೇ ದಿನ ಬ್ಯಾಟಿಂಗ್ ಆರಂಭಿಸಲಿದ್ದಾರೆ.

ಪದಾರ್ಪಣ ಪಂದ್ಯವನ್ನಾಡಿದ ಶೋಯೆಬ್ ಬಶೀರ್ 2 ವಿಕೆಟ್ ಪಡೆದರು. ರೋಹಿತ್ ಶರ್ಮಾ ಮತ್ತು ಅಕ್ಷರ್ ಪಟೇಲ್ ವಿಕೆಟ್ ಪಡೆದು ಸಂಭ್ರಮಿಸಿದರು. ರೆಹಾನ್ ಅಹ್ಮದ್ 2 ವಿಕೆಟ್ ಪಡೆದರೆ, ಜೇಮ್ಸ್ ಆಂಡರ್ಸನ್ ಮತ್ತು ಟಾಮ್ ಹಾರ್ಟ್ಲಿ ತಲಾ ಒಂದು ವಿಕೆಟ್ ಪಡೆದುಕೊಂಡರು.

ಪಿಚ್ ಬ್ಯಾಟಿಂಗ್‌ಗೆ ನೆರವಾಗಿದ್ದು ಎರಡನೇ ದಿನ ದೊಡ್ಡ ಮೊತ್ತ ಕಲೆಹಾಕುವ ಮೂಲಕ ಇಂಗ್ಲೆಂಡ್ ಮೇಲೆ ಮತ್ತಷ್ಟು ಒತ್ತಡ ಹಾಕುವ ಯೋಜನೆಯಲ್ಲಿದೆ ರೋಹಿತ್ ಶರ್ಮಾ ಪಡೆ. ಯಶಸ್ವಿ ಜೈಸ್ವಾಲ್ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು, ಅವರಿಗೆ ಮತ್ತೊಂದು ಬದಿಯಲ್ಲಿ ಬೆಂಬಲ ಸಿಕ್ಕರೆ ಭಾರತ ದೊಡ್ಡ ಮೊತ್ತ ಕಲೆಹಾಕುವುದು ಸುಲಭವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+