Year Ender 2024: ಈ ವರ್ಷ ಕ್ರೀಡೆಯಲ್ಲಿ ಭಾರತಕ್ಕೆ ಎದುರಾದ ಕಹಿ ಕ್ಷಣಗಳು
2024ರಲ್ಲಿ ಭಾರತದ ಕ್ರೀಡಾಭಿಮಾನಿಗಳಿಗೆ ಹಲವು ಖುಷಿ ಸುದ್ದಿಗಳು ಸಿಕ್ಕಿವೆ. ಒಲಿಂಪಿಕ್ಸ್ ಕ್ರೀಡೆಗಳಿಂದ ಮೊದಲಾಗಿ, ಟಿ20 ವಿಶ್ವಕಪ್‌ವರೆಗೆ ಗೆಲುವಿನ ಸಿಹಿ ಭಾರತಕ್ಕೆ ಸಿಕ್ಕಿದೆ. ಅದರಂತೆ ಹಲವು ಕಹಿ ಘಟನೆಗಳು ಕೂಡ ಭಾರತೀಯ ಕ್ರೀಡಾಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ನ್ಯೂಜಿಲೆಂಡ್ ವಿರುದ್ಧ ಭಾರತದ ಸರಣಿ ಸೋಲು ಭಾರತಕ್ಕೆ ದೊಡ್ಡ ಆಘಾತವಾಗಿದ್ದರೆ, ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋತಿದ್ದು ಕೂಡ ಬೇಸರಕ್ಕೆ ಕಾರಣವಾಗಿತ್ತು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕದ ಖಚಿತಪಡಿಸಿಕೊಂಡಿದ್ದ ವಿನೇಶ್ ಫೋಗಟ್ ಅನರ್ಹಗೊಂಡಿದ್ದು ಭಾರತದ ಕ್ರೀಡಾಭಿಮಾನಿಗಳಿಗೆ ದೊಡ್ದ ಆಘಾತ ನೀಡಿತು. ಈ ವರ್ಷ ಕ್ರೀಡೆಯಲ್ಲಿ ನಡೆದ ಪ್ರಮುಖ ಕಹಿ ಘಟನೆಗಳ ಮಾಹಿತಿ ಇಲ್ಲಿದೆ.

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲು
ತವರಿನಲ್ಲಿ ಟೆಸ್ಟ್ ಸರಣಿ ಸೋಲದೆ ಮೆರೆಯುತ್ತಿದ್ದ ಭಾರತ ತಂಡಕ್ಕೆ ದೊಡ್ಡ ಆಘಾತ ನೀಡಿದ್ದು ನ್ಯೂಜಿಲೆಂಡ್. ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಸೋತು ಭಾರತಕ್ಕೆ ಬಂದ ನ್ಯೂಜಿಲೆಂಡ್ ತಂಡ ಭಾರತಕ್ಕೆ ತವರಿನಲ್ಲಿ ಸರಣಿ ಸೋಲಿನ ಶಾಕ್ ನೀಡಿತು. ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ತವರಿನಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 0-3 ಅಂತರದಲ್ಲಿ ಸೋತು ಕೆಟ್ಟ ದಾಖಲೆ ಬರೆಯಿತು. ಈ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸುಲಭವಾಗಿ ತಲುಪುವ ಭಾರತದ ಅವಕಾಶಕ್ಕೆ ದೊಡ್ಡ ಹೊಡೆತ ಕೊಟ್ಟಿತು.
ವಿನೇಶ್ ಫೋಗಟ್ ಅನರ್ಹತೆ
ಭಾರತದ ಹೆಮ್ಮೆಯ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ್ದರು. ವಿನೇಶ್ ಪದಕದೊಂದಿಗೆ ಬರುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ದೊಡ್ಡ ಆಘಾತ ಎದುರಾಗಿತ್ತು, ಫೈನಲ್ ಪಂದ್ಯಕ್ಕೆ ಮುನ್ನ ಅವರನ್ನು ಪಂದ್ಯಾವಳಿಯಿಂದಲೇ ಅನರ್ಹಗೊಳಿಸಲಾಯಿತು. ಕುಸ್ತಿಯಲ್ಲಿ ಅವರು ಅರ್ಹತೆಗಿಂತ ನೂರು ಗ್ರಾಂ ಹೆಚ್ಚು ತೂಕವಿದ್ದ ಕಾರಣ ಅವರು ಒಲಿಂಪಿಕ್ಸ್‌ನಿಂದಲೇ ಹೊರಬೀಳಬೇಕಾಯಿತು.
ಆಂಟಿಮ್ ಪಂಗಲ್ ಗಡೀಪಾರು
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಮತ್ತೊಬ್ಬ ಕುಸ್ತಿಪಟು ಆಂಟಿಮ್ ಪಂಗಲ್ ಶಿಸ್ತನ್ನು ಉಲ್ಲಂಘಿಸಿದ ಆರೋಪದ ಮೇಲೆ ಅವರನ್ನು ಪ್ಯಾರಿಸ್‌ನಿಂದಲೇ ಗಡೀಪಾರು ಮಾಡಲಾಯಿತು. ಇದು ಭಾರತದ ಕ್ರೀಡಾವಲಯಕ್ಕೆ ಮುಜುಗರ ಉಂಟುಮಾಡಿತು. ಆಂಟಿಮ್ ಪಂಗಲ್ ತನ್ನ ಅಕ್ರೆಡಿಟೇಶನ್ ಕಾರ್ಡ್ ಬಳಸಿ ಅಥ್ಲೀಟ್‌ಗಳ ಗ್ರಾಮವನ್ನು ಪ್ರವೇಶಿಸಲು ಪ್ರಯತ್ನಿಸಿದ್ದರಿಂದ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಅವರನ್ನು ಭಾರತಕ್ಕೆ ವಾಪಸ್ ಕರೆಸಿಕೊಂಡಿತು.
ಇಗೊರ್ ಸ್ಟಿಮ್ಯಾಕ್ ವಿವಾದ
2026ರ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆಯಲು ಭಾರತ ವಿಫಲವಾದ ಬಳಿಕ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (AIFF) ಮುಖ್ಯ ಕೋಚ್ ಇಗೊರ್ ಸ್ಟಿಮ್ಯಾಕ್ ಅವರನ್ನು ವಜಾಗೊಳಿಸಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು. 2019 ರಿಂದ ಕೋಚ್ ಆಗಿದ್ದ ಸ್ಟಿಮ್ಯಾಕ್ ವಿರುದ್ಧ ಎಐಎಫ್‌ಎಫ್ ಹಲವು ಆರೋಪ ಮಾಡಿತ್ತು, ಸ್ಟಿಮಾಕ್ ಕೂಡ ತನಗೆ ಎಐಎಫ್‌ಎಫ್ ಸಂಭಾವನೆ ಬಾಕಿ ಉಳಿಸಿಕೊಂಡಿದೆ ಎಂದು ಫಿಫಾವನ್ನು ಸಂಪರ್ಕಿಸಿದಿರು. ಬಳಿಕ ಎಐಎಫ್‌ಎಫ್ $400,000 ಅನ್ನು ಪಾವತಿ ಮಾಡಬೇಕಾಯಿತು.
ಕೆಎಲ್ ರಾಹುಲ್‌ಗೆ ಅವಮಾನ
2024ರ ಐಪಿಎಲ್ ಸಂದರ್ಭದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಮತ್ತು ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ನಡುವೆ ನಡೆದ ಘಟನೆ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲ್‌ಎಸ್‌ಜಿ ಸೋಲನುಭವಿದ್ದು ಸಂಜೀವ್ ಗೊಯೆಂಕಾ ಅಸಮಾಧಾನಕ್ಕೆ ಕಾರಣವಾಗಿತ್ತು, ಮೈದಾನದಲ್ಲೇ ಕೆಎಲ್ ರಾಹುಲ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆಗಲೇ ಕೆಎಲ್ ರಾಹುಲ್ ತಂಡವನ್ನು ತೊರೆಯುವುದು ಖಚಿತವಾಗಿತ್ತು, 2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications