Year Ender 2024: ಸೋತರೂ ಗೆದ್ದರೂ ಆರ್‌ಸಿಬಿಯದ್ದೇ ಅಬ್ಬರ!

2024 ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, 2025ರ ಹೊಸ ವರ್ಷವನ್ನು ಸ್ವಾಗತಿಸಲು ಜಗತ್ತು ಸಜ್ಜಾಗಿದೆ. 2024ರಲ್ಲಿ ಅನೇಕ ಮಹತ್ವದ ಘಟನೆಗಳು ನಡೆದಿವೆ. ಭಾರತ ಕ್ರಿಕೆಟ್ ಅಭಿಮಾನಿಗಳಿಗೆ ಕೂಡ ಸೋಲು ಗೆಲುವಿನ ಸಿಹಿ ಕಹಿ ಸಿಕ್ಕಿದೆ. ಜಗತ್ತಿನ ಶ್ರೀಮಂತ ಕ್ರಿಕೆಟ್‌ ಲೀಗ್‌ ಎನಿಸಿಕೊಂಡಿರುವ ಐಪಿಎಲ್‌ 2024ರ ಆವೃತ್ತಿಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ.

ಜಿಯೋ ಸಿನಿಮಾ ಉಚಿತವಾಗಿ ಐಪಿಎಲ್ ಪಂದ್ಯಗಳನ್ನು ನೋಡಲು ಅವಕಾಶ ಮಾಡಿಕೊಟ್ಟಿದ್ದರಿಂದ, 2024ರ ಆವೃತ್ತಿಯಲ್ಲಿ ವೀಕ್ಷಕರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿತ್ತು. ಅದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಿಎಸ್‌ಕೆ ನಡುವಿನ ಲೀಗ್ ಹಂತದ ಕೊನೆಯ ಪಂದ್ಯದ ವೀಕ್ಷಕರ ಸಂಖ್ಯೆ 50 ಕೋಟಿ ಸಮೀಪಿಸಿ ಹೊಸ ದಾಖಲೆ ಬರೆದಿದೆ.

year ender 2024 most viewed ipl matches of 2024 rcb on top

ಐಪಿಎಲ್‌ನಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಫ್ರಾಂಚೈಸಿಗಳಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ಮುಂಚೂಣಿಯಲ್ಲಿವೆ. ಅಂತಹದ್ದರಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾದರೆ ನೋಡುಗರ ಸಂಖ್ಯೆ ಸಹಜವಾಗಿಯೇ ಹೆಚ್ಚುತ್ತಿದೆ. ಅಲ್ಲದೆ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿಯನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ.

ಹಾಗಾದರೆ 2024ರ ಐಪಿಎಲ್‌ನಲ್ಲಿ ಅತಿ ಹೆಚ್ಚು ವೀಕ್ಷಕರು ನೋಡಿದ ಟಾಪ್ 5 ಐಪಿಎಲ್ ಪಂದ್ಯಗಳು ಯಾವುವು ಎನ್ನುವುದರ ಮಾಹಿತಿ ಇಲ್ಲಿದೆ.

1.ಆರ್‌ಸಿಬಿ vs ಸಿಎಸ್‌ಕೆ

ಸಿಎಸ್‌ಕೆ ಮತ್ತು ಆರ್ ಸಿಬಿ ನಡುವಿನ ಐಪಿಎಲ್ 2024ರ ಲೀಗ್ ಹಂತದ 68ನೇ ಪಂದ್ಯ ಐಪಿಎಲ್‌ ಇತಿಹಾಸದಲ್ಲೇ ಅತ್ಯಂತ ರೋಚಕ ಪಂದ್ಯಗಳಲ್ಲಿ ಒಂದಾಗಿದೆ. ಪ್ಲೇ ಆಫ್‌ ತಲುಪಲು ಎರಡೂ ತಂಡಗಳಿಗೂ ಇದು ಗೆಲ್ಲಲೇಬೇಕಾದ ಪಂದ್ಯವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ 27 ರನ್‌ಗಳ ಗೆಲುವು ಸಾಧಿಸಿತು. ರೋಚಕವಾಗಿದ್ದ ಈ ಪಂದ್ಯವನ್ನು ಜಿಯೋ ಸಿನಿಮಾದಲ್ಲಿ ವೀಕ್ಷಿಸಿದವರ ಸಂಖ್ಯೆ 50 ಕೋಟಿ ಎಂದು ಹೇಳಲಾಗಿದೆ.

2. ಸಿಎಸ್‌ಕೆ vs ಆರ್‌ಸಿಬಿ

2024ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ ಮತ್ತು ಸಿಎಸ್‌ಕೆ ಮುಖಾಮುಖಿಯಾಗಿದ್ದವು. ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಸಿಎಸ್‌ಕೆ 6 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತ್ತು. ಜಿಯೋ ಸಿನಿಮಾ ಆಪ್‌ನಲ್ಲಿ ಈ ಉದ್ಘಾಟನಾ ಪಂದ್ಯ ವೀಕ್ಷಿಸಿದವರ ಸಂಖ್ಯೆ 37.5 ಕೋಟಿ. ಇದು ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ವೀಕ್ಷಕರನ್ನು ಆಕರ್ಷಿಸಿದ ಉದ್ಘಾಟನಾ ಪಂದ್ಯವಾಗಿದೆ.

3. ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್

ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವನ್ನು ಜಿಯೋ ಸಿನಿಮಾದಲ್ಲಿ 28.6 ಕೋಟಿ ಮಂದಿ ವೀಕ್ಷಣೆ ಮಾಡಿದ್ದು ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 277 ರನ್‌ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿತ್ತು.

4. ಸಿಎಸ್‌ಕೆ ಮತ್ತು ಗುಜರಾತ್ ಟೈಟಾನ್ಸ್

ಸಿಎಸ್‌ಕೆ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವನ್ನು 25.2 ಕೋಟಿ ಮಂದಿ ವೀಕ್ಷಣೆ ಮಾಡಿದ್ದು ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

5. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್‌ 2024ರ 58ನೇ ಪಂದ್ಯವನ್ನು ಜಿಯೋ ಸಿನಿಮಾದಲ್ಲಿ 24 ಕೋಟಿ ಮಂದಿ ವೀಕ್ಷಿಸಿದ್ದು 5ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಆರ್ ಸಿಬಿ 60 ರನ್‌ಗಳ ಭರ್ಜರಿ ಗೆಲುವ ಸಾಧಿಸಿತ್ತು.

ನಂತರದ ಸ್ಥಾನದಲ್ಲಿ ಸಿಎಸ್‌ಕೆ vs ಡೆಲ್ಲಿ ಕ್ಯಾಪಿಟಲ್ಸ್ (24 ಕೋಟಿ), ರಾಜಸ್ಥಾನ ರಾಯಲ್ಸ್ vs ಆರ್ ಸಿಬಿ (23 ಕೋಟಿ), ಆರ್ ಸಿಬಿ vs ಲಕ್ನೋ ಸೂಪರ್ ಜೈಂಟ್ಸ್ (22.5 ಕೋಟಿ), ಆರ್ ಸಿಬಿ vs ಕೆಕೆಆರ್ (21.8 ಕೋಟಿ) ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಐಪಿಎಲ್ ಪಂದ್ಯಗಳಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+