Yuvraj Singh: ಮತ್ತೊಮ್ಮೆ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಕಾಡಿದ ಯುವರಾಜ್ ಸಿಂಗ್

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL) ನ ಸೆಮಿ-ಫೈನಲ್‌ನಲ್ಲಿ ಭಾರತ ಚಾಂಪಿಯನ್ಸ್ ಆಸ್ಟ್ರೇಲಿಯಾ ಚಾಂಪಿಯನ್ಸ್‌ಗಳನ್ನು ಮಟ್ಟಹಾಕಿದ್ದು, ಫೈನಲ್‌ಗೆ ಲಗ್ಗೆಯಿಟ್ಟಿದೆ.

ಯುವರಾಜ್ ಸಿಂಗ್ ನಾಯಕತ್ವದಲ್ಲಿ ಸೆಣೆಸುತ್ತಿರುವ ಭಾರತ ಲೀಗ್ ಹಂತದಲ್ಲಿ ಸತತ ಮೂರು ಪಂದ್ಯಗಳನ್ನು ಸೋತರೂ ರನ್‌ ರೇಟ್ ಉತ್ತಮವಾಗಿದ್ದರಿಂದ ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಆದರೆ ಸೆಮಿಫೈನಲ್‌ನಲ್ಲಿ ಅಬ್ಬರಿಸಿದ ಭಾರತದ ಬ್ಯಾಟರ್ ಗಳು ಆಸ್ಟ್ರೇಲಿಯಾ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿದರು.

Yuvraj Singh Dominates Australia in WCL Semi-Finals with Vintage Knock

ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್, ಇರ್ಫಾನ್ ಪಠಾಣ್ ಮತ್ತು ಯೂಸುಫ್ ಪಠಾಣ್ ಅವರ ಅರ್ಧಶತಕಗಳ ನೆರವಿನಿಂದ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 254 ರನ್ ಗಳಿಸಿದ್ದರು.

ಯುವರಾಜ್ ಸಿಂಗ್‌ ಸ್ಫೋಟಕ ಬ್ಯಾಟಿಂಗ್

ನಾರ್ಥಾಂಪ್ಟನಲ್ಲಿ ಭಾರತ ಚಾಂಪಿಯನ್ಸ್ ತಂಡದ ನಾಯಕ ಯುವರಾಜ್ ಸಿಂಗ್ 28 ಎಸೆತಗಳಲ್ಲಿ 59 ರನ್ ಗಳಿಸುವ ಮೂಲಕ ಅಬ್ಬರಿಸಿದರು. ಭಾರತ ಬೃಹತ್ ಮೊತ್ತ ಗಳಿಸುವಲ್ಲಿ ನೆರವಾದರು.

ಯುವರಾಜ್ ಸಿಂಗ್ ದೊಡ್ಡ ಪಂದ್ಯಗಳಲ್ಲಿ ವಿಶೇಷವಾಗಿ ಆಸ್ಟ್ರೇಲಿಯಾ ವಿರುದ್ಧ ಪ್ರದರ್ಶನ ನೀಡಿದ್ದು, ಆಸ್ಟ್ರೇಲಿಯಾಗೆ ಮತ್ತೊಮ್ಮೆ ದೇಜಾ-ವು ಆಗಿತ್ತು, ಮಾಜಿ ಭಾರತ ಆಲ್‌ರೌಂಡರ್ ಇನ್ನೂ ಆಸ್ಟ್ರೇಲಿಯಾ ತಂಡಕ್ಕೆ ದುಸ್ವಪ್ನವಾಗಿದ್ದಾರೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಯುವರಾಜ್ ಸಿಂಗ್, 2000ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ 84 ರನ್ ಗಳಿಸಿದ್ದರು. 2007ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 30 ಎಸೆತಗಳಲ್ಲಿ 70 ರನ್ ಗಳಿಸಿ ಮತ್ತೊಮ್ಮೆ ಭಾರತ ತಂಡಕ್ಕೆ ನೆರವಾದರು.

2011ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ 65 ಎಸೆತಗಳಲ್ಲಿ ಅಜೇಯ 57 ರನ್ ಗಳಿಸಿದರೆ, 2014ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ 43 ಎಸೆತಗಳಲ್ಲಿ 60 ರನ್ ಗಳಿಸಿದರು. ಈಗ ವಿಶ್ವ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ ಸೆಮಿಫೈನಲ್‌ನಲ್ಲಿ 28 ಎಸೆತಗಳಲ್ಲಿ 59 ರನ್ ಗಳಿಸಿ ಮಿಂಚಿದ್ದಾರೆ.

ಇಂದು ಪಾಕಿಸ್ತಾನ ವಿರುದ್ಧ ಫೈನಲ್

ರಾಬಿನ್ ಉತ್ತಪ್ಪ (65), ಯುವರಾಜ್, ಯೂಸುಫ್ ಪಠಾಣ್ (51) ಮತ್ತು ಇರ್ಫಾನ್ ಪಠಾಣ್ (50) ಅವರು ತ್ವರಿತ ಅರ್ಧಶತಕಗಳ ನೆರವಿನಿಂದ ಭಾರತ ಚಾಂಪಿಯನ್‌ಗ 254/6 ಮೊತ್ತ ಗಳಿಸಿತು. ಧವಳ್ ಕುಲಕರ್ಣಿ ಮತ್ತು ಪವನ್ ನೇಗಿ ತಲಾ ಎರಡು ವಿಕೆಟ್ ಪಡೆದಿದ್ದರಿಂದ ಆಸ್ಟ್ರೇಲಿಯಾ 168/7ಕ್ಕೆ ಸೀಮಿತವಾಯಿತು. ಭಾರತ ಈಗ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಗ್ರೂಪ್ ಹಂತದಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ 68 ರನ್‌ಗಳಿಂದ ಸೋತ ನಂತರ, ಸುರೇಶ್ ರೈನಾ ನೇತೃತ್ವದ ಭಾರತ ಚಾಂಪಿಯನ್ಸ್ ಶನಿವಾರದ ಫೈನಲ್‌ನಲ್ಲಿ ತಮ್ಮ ಸಾಂಪ್ರದಾಯಿಕ ಎದುರಾಳಿಗಳ ವಿರುದ್ಧ ಸೇಡು ತೀರಿಸಿಕೊಳ್ಳಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+