IPL 2023: ಲಸಿತ್ ಮಾಲಿಂಗ ದಾಖಲೆಯನ್ನು ಮುರಿದ ಯುಜ್ವೇಂದ್ರ ಚಹಾಲ್

ರಾಜಸ್ಥಾನ ರಾಯಲ್ಸ್‌ನ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಪ್ರಮುಖ ಮೈಲಿಗಲ್ಲು ದಾಖಲಿಸಿದ್ದಾರೆ. ಅನುಭವಿ ಸ್ಟಾರ್ ಸ್ಪಿನ್ನರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 171 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಶ್ರೀಲಂಕಾದ ವೇಗದ ಬೌಲರ್, ಲಸಿತ್ ಮಾಲಿಂಗ ಅವರ ದಾಖಲೆಯನ್ನು ಹಿಂದಿಕ್ಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಬುಧವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಈ ದಾಖಲೆ ಬರೆದರು.

2022ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು, ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲನೇ ಪಂದ್ಯದಲ್ಲಿ ಕೂಡ ಅವರು ನಾಲ್ಕು ವಿಕೆಟ್ ಪಡೆದುಕೊಂಡಿದ್ದರು. ಪಂಜಾಬ್ ಕಿಂಗ್ಸ್ ವಿರುದ್ದ ಕೇವಲ ಒಂದು ವಿಕೆಟ್ ಪಡೆದರು ಮಾಲಿಂಗ ಅವರ ದಾಖಲೆಯನ್ನು ಹಿಂದಿಕ್ಕಿದರು.

Yuzvendra Chahal

ಯುಜುವೇಂದ್ರ ಚಹಾಲ್ ಇದುವರೆಗೂ 132 ಇನ್ನಿಂಗ್ಸ್‌ಗಳಲ್ಲಿ 21.58 ಸರಾಸರಿಯಲ್ಲಿ 171 ವಿಕೆಟ್ ಪಡೆದುಕೊಂಡಿದ್ದಾರೆ. ಅವರ ಎಕಾನಮಿ ಕೂಡ 7.63 ಆಗಿರುವುದು ಅವರೆಂತಹ ಅತ್ಯುತ್ತಮ ಬೌಲರ್ ಎಂದು ತಿಳಿಸುತ್ತದೆ. ಈ ಬಾರಿಯ ಐಪಿಎಲ್‌ನಲ್ಲಿ ಅವರು ಎರಡು ಪಂದ್ಯಗಳಲ್ಲಿ 5 ವಿಕೆಟ್ ಪಡೆಯುವ ಮೂಲಕ ಉತ್ತಮ ಫಾರ್ಮ್ ಅನ್ನು ಪ್ರದರ್ಶಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಾಗಿದ್ದ ಅವರು ಸದ್ಯ ರಾಜಸ್ಥಾನ ರಾಯಲ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸಿಕೊಳ್ಳಲು ಅವರು ಐಪಿಎಲ್‌ ಲೆಜೆಂಡ್ ಡ್ವೇನ್ ಬ್ರಾವೋ ಅವರ ದಾಖಲೆಯನ್ನು ಮುರಿಯಬೇಕಾಗುತ್ತದೆ, ಡ್ವೇನ್ ಬ್ರಾವೋ 183 ವಿಕೆಟ್ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಯುಜುವೇಂದ್ರ ಚಹಾಲ್ ಅವರ ದಾಖಲೆಯನ್ನು ಮುರಿಯುವ ಉತ್ತಮ ಅವಕಾಶವನ್ನು ಹೊಂದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 161 ಪಂದ್ಯಗಳನ್ನಾಡಿರುವ ಡ್ವೇನ್ ಬ್ರಾವೋ 183 ವಿಕೆಟ್ ಪಡೆದುಕೊಂಡಿದ್ದಾರೆ. ಅವರ ಎಕಾನಮಿ 8.38 ಆಗಿದೆ. ಲಸಿತ್ ಮಾಲಿಂಗ 122 ಪಂದ್ಯಗಳನ್ನು ಆಡಿದ್ದು 7.14 ಎಕಾನಮಿಯಲ್ಲಿ 170 ವಿಕೆಟ್ ಪಡೆದುಕೊಂಡಿದ್ದಾರೆ. ಮೊದಲ ಎರಡು ಸ್ಥಾನಗಳಲ್ಲಿ ವಿದೇಶಿ ಆಟಗಾರರೇ ಇದ್ದದ್ದು ವಿಶೇಷ ಅದರಲ್ಲೂ ವೇಗದ ಬೌಲರ್ ಗಳಿಗೆ ಪೈಪೋಟಿ ನೀಡಿರುವ ಸ್ಪಿನ್ನರ್ ಮೊದಲನೇ ಸ್ಥಾನದತ್ತ ಮುನ್ನಡೆಯುತ್ತಿದ್ದಾರೆ.

ರೋಚಕ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್

ಅಸ್ಸಾಂನ ಗುಹಾವಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್‌ ಗಳಿಸಿತು. ನಾಯಕ ಶಿಖರ್ ಧವನ್ 56 ಎಸೆತಗಳಲ್ಲಿ 86 ಗಳಿಸಿದರೆ, ಪ್ರಭ್‌ಶಿಮ್ರನ್ 34 ಎಸೆತಗಳಲ್ಲಿ 60 ರನ್ ಗಳಿಸಿ ಮಿಂಚಿದರು. ಜಿತೇಶ್ ಶರ್ಮಾ ಕೂಡ 16 ಎಸೆತಗಳಲ್ಲಿ 27 ರನ್ ಗಳಿಸಿದರು.

198 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 192 ರನ್ ಗಳಿಸುವ ಮೂಲಕ 5 ರನ್‌ಗಳ ರೋಚಕ ಸೋಲು ಕಂಡಿತು. 10 ವರ್ಷಗಳ ಬಳಿಕ ರವಿಚಂದ್ರನ್ ಅಶ್ವಿನ್ ಆರಂಭಿಕರಾಗಿ ಕಣಕ್ಕಿಳಿದರೂ, 4 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೇ ಔಟಾದರು. ಸಂಜು ಸ್ಯಾಮ್ಸನ್ 25 ಎಸೆತಗಳಲ್ಲಿ 42 ರನ್ ಗಳಿಸಿದರೂ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ. ಶಿಮ್ರಾನ್ ಹೆಟ್ಮೇರ್ ಮತ್ತು ಧ್ರುವ್ ಜುರೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+