India vs Zimbabwe: ವಿಶ್ವ ಚಾಂಪಿಯನ್ನರಿಗೆ ಆಘಾತ ಕೊಟ್ಟ ಜಿಂಬಾಬ್ವೆ; ಗಿಲ್ ಪಡೆಗೆ ಸೋಲು!

ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಭಾರತ ತಂಡಕ್ಕೆ ಜಿಂಬಾಬ್ವೆ ಆಘಾತ ಕೊಟ್ಟಿದೆ. 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಭಾರತದ ವಿರುದ್ಧ 13 ರನ್‌ಗಳ ಗೆಲುವು ಸಾಧಿಸಿದೆ.

ಜಿಂಬಾಬ್ವೆಯ ಹರಾರೆಯಲ್ಲಿ ನಡೆದ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮುಗ್ಗರಿಸಿತು. ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಿತು, ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 115 ರನ್ ಕಲೆಹಾಕಿತು.

Zimbabwe Triumphs Over India in T20 Series First Match

ಈ ಮೊತ್ತವನ್ನು ಬೆನ್ನತ್ತಿದ ಭಾರತ 19.5 ಓವರ್ ಗಳಲ್ಲಿ 102 ರನ್‌ಗಳಿಗೆ ಆಲೌಟ್ ಆಗುವ ಮೂಲಕ 13 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಟಿ20 ವಿಶ್ವಕಪ್ ಗೆದ್ದ ಬಳಿಕ ಆಡಿದ ಮೊದಲ ಟಿ20 ಪಂದ್ಯದಲ್ಲೇ ಭಾರತಕ್ಕೆ ಸೋಲಿನ ಆಘಾತ ಎದುರಾಗಿದೆ.

ನಾಯಕ ಗಿಲ್‌ಗೆ ಸೋಲಿನ ಕಹಿ

ಟಿ20 ವಿಶ್ವಕಪ್ ತಂಡದಲ್ಲಿದ್ದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರ ತಂಡ ಜಿಂಬಾಬ್ವೆ ವಿರುದ್ಧದ ಸರಣಿಗೆ ಅವಕಾಶ ಪಡೆದಿದ್ದರು. ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು, ಜಿಂಬಾಬ್ವೆ ವಿರುದ್ಧ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದರು. ಅದರೆ ಜಿಂಬಾಬ್ವೆ ಆಟಗಾರರು ಭಾರತ ತಂಡದ ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದ್ದಾರೆ.

ಭಾರತ ಮೊದಲು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತು. ರವಿ ಬಿಷ್ಣೋಯಿ 4 ಓವರ್ ಗಳಲ್ಲಿ ಕೇವಲ 13 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರೆ, ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ತಲಾ 1 ವಿಕೆಟ್ ಪಡೆದರು.

ಜಿಂಬಾಬ್ವೆ 115 ರನ್ ಗಳಿಸಿದಾಗ ಭಾರತ ಸುಲಭವಾಗಿ ಗೆಲುವು ಸಾಧಿಸುತ್ತದೆ ಎಂದುಕೊಳ್ಳಲಾಗಿತ್ತು. ಆದರೆ ಜಿಂಬಾಬ್ವೆ ಶಿಸ್ತಿನ ಬೌಲಿಂಗ್‌ ಮಾಡುವ ಮೂಲಕ ಭಾರತ ತಂಡಕ್ಕೆ ಮಾರಕವಾದರು. ಶುಭಮನ್ ಗಿಲ್ 31, ವಾಷಿಂಗ್ಟನ್ ಸುಂದರ್ 27 ಮತ್ತು ಆವೇಶ್ ಖಾನ್ 16 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳು ಎರಡಂಕಿ ರನ್ ಗಳಿಸಲು ವಿಫಲವಾದರು.

ಐಪಿಎಲ್‌ನಲ್ಲಿ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ ಡಕೌಟ್ ಆದರು. ರಿಂಕು ಸಿಂಗ್ ಕೂಡ ಡಕೌಟ್ ಆಗಿದ್ದು ಭಾರತವನ್ನು ಸಂಕಷ್ಟಕ್ಕೆ ಸಿಲುಕಿಸಿತು. ಅಂತಿಮವಾಗಿ 102 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ಭಾರತ ಟಿ20 ತಂಡದ ನಾಯಕನಾಗಿ ಶುಭಮನ್ ಗಿಲ್ ಮೊದಲ ಪಂದ್ಯದಲ್ಲಿ ಸೋಲಿನ ಕಹಿ ಸಿಕ್ಕಿದೆ. ಇನ್ನೂ ನಾಲ್ಕು ಪಂದ್ಯಗಳು ಉಳಿದಿದ್ದು, ಭಾರತ ವಾಪಸಾತಿ ಮಾಡುವ ಮೂಲಕ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+