ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: 10 ಮಂದಿಗೆ ಗಂಭೀರ ಗಾಯ

|
Google Oneindia Kannada News

ಶ್ರೀನಗರ, ಅಕ್ಟೋಬರ್ 5: ಜಮ್ಮು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಗ್ರೆನೇಡ್ ದಾಳಿ ನಡೆದಿದ್ದು 10 ಮಂದಿಗೆ ಗಂಭೀರ ಗಾಯಗಳಾಗಿವೆ.

ಅನಂತ್‌ನಾಗ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಭಯೋತ್ಪಾದಕರು ಗ್ರೆನೇಟ್ ಸ್ಫೋಟಿಸಿದ್ದಾರೆ.ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು.

ಕೊನೆಗೂ ಕತ್ತಲೆಯಿಂದ ಬೆಳಕಿನೆಡೆಗೆ ಜಮ್ಮು- ಕಾಶ್ಮೀರದ ಈ ಗ್ರಾಮಕೊನೆಗೂ ಕತ್ತಲೆಯಿಂದ ಬೆಳಕಿನೆಡೆಗೆ ಜಮ್ಮು- ಕಾಶ್ಮೀರದ ಈ ಗ್ರಾಮ

ಆದರೆ ಗುರಿ ತಪ್ಪಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. 10 ಜನರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

10 Injured In Grenade Attack Outside Anantnag DC Office

ಶ್ರೀನಗರದಿಂದ 55 ಕಿ.ಮೀ. ದೂರದಲ್ಲಿರುವ ಅನಂತ್‍ನಾಗ್ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಳಿಯಲ್ಲಿ 12 ವರ್ಷದ ಬಾಲಕ ಸೇರಿದಂತೆ 10 ಮಂದಿ ಗಾಯಗೊಂಡಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಸ್ಫೋಟ ಸಂಭವಿಸುತ್ತಿದ್ದಂತೆ ಅಲ್ಲಿನ ಭದ್ರತಾ ಪಡೆ ಸುತ್ತುವರಿದಿದ್ದು, ದಾಳಿಯ ಹಿಂದಿರುವ ಭಯೋತ್ಪಾದಕರನ್ನು ಬಂಧಿಸಲು ಬೇಟೆ ಪ್ರಾರಂಭಿಸಿದ್ದಾರೆ. ಈವರೆಗೆ ಯಾವುದೇ ಉಗ್ರ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಾಶ್ಮೀರದ ಕಣಿವೆಯಲ್ಲಿ ಉಗ್ರರು ಭದ್ರತಾ ಪಡೆ ಮೇಲೆ ನಡೆಸುತ್ತಿರುವ ಎರಡನೇ ದಾಳಿ ಇದಾಗಿದೆ.

English summary
10 Injured In Grenade Attack Outside Anantnag DC Office, suspected terrorists hurled a grenade outside the deputy commissioner's office in Jammu and Kashmir's Anantnag on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X