ಜಮ್ಮು- ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತ; 12 ಸಾವು, 14 ಜನಕ್ಕೆ ಗಾಯ
ಶ್ರೀನಗರ, ಜನವರಿ 1: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದಾಗಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಹದಿನಾಲ್ಕು ಜನರು ಗಾಯಗೊಂಡಿದ್ದಾರೆ.
ದೇವಸ್ಥಾನದಲ್ಲಿ ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ತ್ರಿಕೂಟ ಬೆಟ್ಟದ ಮಾತಾ ವೈಷ್ಣೋದೇವಿ ಗರ್ಭಗುಡಿಯ ಹೊರಭಾಗದಲ್ಲಿ ಕಾಲ್ತುಳಿತದ ಘಟನೆ ನಡೆದಿದೆ. ವೈಷ್ಣೋದೇವಿ ಭವನದಲ್ಲಿ ಹೊಸ ವರ್ಷದ ಆರಂಭದ ಅಂಗವಾಗಿ ಪೂಜೆ ಸಲ್ಲಿಸಲು ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಹಾಗೂ ದೇಗುಲ ಮಂಡಳಿಯ ಪ್ರತಿನಿಧಿಗಳು ಆಗಮಿಸಿದ್ದು, ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.













Click it and Unblock the Notifications