ನೌಗಾಮ್‌ನಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ
ನೌಗಾಮ್, ಆಗಸ್ಟ್ 14: ಜಮ್ಮು ಮತ್ತು ಕಾಶ್ಮೀರದ ನೌಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಜಮ್ಮು ಉಗ್ರರು ದಾಳಿ ನಡೆಸಿದ್ದಾರೆ.ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಇದೀಗ ಭದ್ರತಾ ಪಡೆಗಳು ಸುತ್ತುವರೆದಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ.
ಶ್ರೀನಗರ ನಗರದ ಹೊರವಲಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಗಾಯಗೊಂಡಿದ್ದ ಮೂವರು ಪೊಲೀಸರ ಪೈಕಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.











Click it and Unblock the Notifications