• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಗ್ರರ ದಾಳಿ: ಇಬ್ಬರು ಸಿಆರ್‌ಪಿಎಫ್, ಓರ್ವ ಪೊಲೀಸ್ ಅಧಿಕಾರಿ ಹುತಾತ್ಮ

|

ಶ್ರೀನಗರ, ಆಗಸ್ಟ್ 17: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ, ಓರ್ವ ಪೊಲೀಸ್ ಅಧಿಕಾರಿ ಸೇರಿ ಮೂವರು ಹುತಾತ್ಮರಾಗಿದ್ದಾರೆ.

ಉಗ್ರರು ನಡೆಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಹತ್ತಿರದಲ್ಲಿದ್ದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.

ನೌಗಾಮ್‌ನಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

ಬರಾಮುಲ್ಲಾ ಜಿಲ್ಲೆಯ ಕ್ರೀರಿ ಎಂಬ ಪ್ರದೇಶದಕ್ಕೆ ಬಂದಿರುವ ಉಗ್ರರು ಈ ವೇಳೆ ಗಸ್ತು ತಿರುಗುತ್ತಿದ್ದ ಸಿಆರ್‌ಪಿಎಫ್ ಪಡೆಯ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಓಡಿಹೋಗಿದ್ದಾರೆ. ಇನ್ನು ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಉಗ್ರರು ಪೊಲೀಸ್ ನಾಕಾ ಪಾರ್ಟಿ ಹಾಗೂ ಸಿಆರ್‌ಪಿಎಫ್ ಮೇಲೆ ಕ್ರೀರಿ ಎಂಬಲ್ಲಿ ದಾಳಿ ನಡೆಸಿದ್ದಾರೆ. ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿದ್ದಾರೆ, ಮೂವರಿಗೂ ಗುಂಡು ತಗುಲಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆಸರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಒಂದು ವಾರದಿಂದೀಚೆಗೆ ಭದ್ರತಾ ಪಡೆಗಳ ಮೇಲೆ ನಡೆಯುತ್ತಿರುವ ಮೂರನೇ ದಾಳಿ ಇದಾಗಿದೆ. ಆಗಸ್ಟ್14 ರಂದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದು ಓರ್ವ ಗಾಯಗೊಂಡಿದ್ದರು. ಸಿಸಿಟಿವಿಯಲ್ಲಿ ಅವರ ದೃಶ್ಯ ಸೆರೆಯಾಗಿದೆ. ನಿನ್ನೆಯಷ್ಟೇ ಓರ್ವ ವ್ಯಕ್ತಿ ಪುಲ್ವಾಮಾದಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

English summary
Three security personnel - two personnel of the (Central Reserve Police Force) and one cop of the Jammu and Kashmir Police - were killed in the line of duty this morning in a terror attack in Jammu and Kashmir's Baramulla district, about 50 km from Srinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X