ಶೋಪಿಯಾನ್ ಎನ್‌ಕೌಂಟರ್: ಜೈಷ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ
Recommended Video

ಜಮ್ಮು ಮತ್ತು ಕಾಶ್ಮೀರ, ಫೆಬ್ರವರಿ 27: ಜಮ್ಮು ಮತ್ತು ಕಾಶ್ಮೀರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಉಗ್ರರ ಉಪಟಳ ಇನ್ನೂ ಕಡಿಮೆಯಾಗಿಲ್ಲ. ಇಂದು ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಪಾಕಿಸ್ತಾನ ಗಡಿನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ, ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದೆ. ಐವರು ಭಾರತೀಯ ಸೈನಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಇದೀಗ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುಲ್ವಾಮಾದಲ್ಲಿ ಜೈಷ್ ಸಂಘಟನೆಯ ಉಗ್ರರು ನಡೆಸಿದ ಕೃತ್ಯಕ್ಕೆ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು ಅದಕ್ಕೆ ಪ್ರೀಕಾರವಾಗಿ ಪಾಕಿಸ್ತಾನದ ಬಾಲಾಕೋಟದಲ್ಲಿರುವ ಉಗ್ರರ ನೆಲೆ ಮೇಲೆ ಯೋಧರು ಬಾಂಬ್ ಸಿಡಿಸಿ ಪ್ರತೀಕಾರ ತೀರಿಸಿಕೊಂಡಾಗಿದೆ.

ಆದರೆ ಇದೀಗ ಪರಿಸ್ಥಿತಿ ತೀರಾ ಗಂಭೀರವಾಗಿದೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಭಾರೀ ಗುಂಡಿನ ಚಕಮಕಿ ಬುಧವಾರ ಮುಂಜಾನೆ ನಡೆದಿದ್ದು ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.
ಶೋಪಿಯಾನ್ ಜಿಲ್ಲೆಯ ಮಾಮೆಂಡರ್ ಗ್ರಾಮದಲ್ಲಿ ಭದ್ರತಾ ಪಡೆ ಪೊಲೀಸರು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಇಲ್ಲಿ ಉಗ್ರರು ಅವಿತಿರುವ ಬಗ್ಗೆ ನಿನ್ನೆಯೇ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮತ್ತಿಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಯಿದೆ.
ಉಗ್ರರು ಅಡಗಿ ಕುಳಿತಿದ್ದ ಅಡಗುದಾಣಗಳ ಸುತ್ತ ಪ್ರದೇಶವನ್ನು ಭದ್ರತಾ ಪಡೆ ಪೊಲೀಸರು ಸುತ್ತುವರಿದಾಗ ಪೊಲೀಸರೆಡೆಗೆ ಗುಂಡಿನ ಮಳೆಗೈಯಲಾರಂಭಿಸಿದರು. ಇದಕ್ಕೆ ಯೋಧರು ಪ್ರತಿ ದಾಳಿ ನಡೆಸಿದ್ದರಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.












Click it and Unblock the Notifications