• search
 • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಎನ್‌ಕೌಂಟರ್: ನಾಲ್ವರು ಉಗ್ರರ ಹತ್ಯೆ

|

ಶ್ರೀನಗರ, ಜೂನ್ 13:ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಮೃತಪಟ್ಟಿದ್ದಾರೆ.

   Haveri people neglect all the rules and participate in Bandi Run | Haveri | Oneindia Kannada

   ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಶನಿವಾರ ಮುಂಜಾನೆ ಗುಂಡಿನ ಸದ್ದು ಕೇಳಿಸಿದೆ. ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ.

   ಹಾಗೆಯೇ ಅನಂತ್‌ನಾಗ್ ಜಿಲ್ಲೆಯ ಲಲ್ಲನ್‌ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ.

   ಖಚಿತ ಮಾಹಿತಿಯನ್ನು ಪಡೆದು ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯನ್ನು ಆರಂಭಿಸಿದ್ದರು, ಉಗ್ರರು ಅಡಗಿದ್ದ ಖಚಿತ ಮಾಹಿತಿ ಪಡೆದು ತೆರಳಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಉಗ್ರರನ್ನು ಸದೆಬಡಿಯಲಾಗಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

   2020ರ ಜನವರಿಯಿಂದ ಜೂನ್ 10ರವರೆಗೆ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಇದರಲ್ಲಿ ಜೈಷ್ ಎ ಮೊಹಮ್ಮದ್, ಲಷ್ಕರ್ ಎ ತೊಯ್ಬಾ, ಹುಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಹಲವು ಸಂಘಟನೆಗಳ ಉಗ್ರರು ಸೇರಿದ್ದಾರೆ.

   ಕೊರೊನಾ ಲಾಕ್‌ಡೌನ್ ಆದಾಗಿನಿಂದ ಏಪ್ರಿಲ್ 1ರಿಂದ ಜೂನ್ 10ರವರೆಗೆ 68 ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ ಪಾಕಿಸ್ತಾನದ ಕೆಲವು ಭಯೋತ್ಪಾದಕರಿದ್ದಾರೆ ಎನ್ನುವ ಮಾಹಿತಿಯೂ ಇದೆ.

   ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್: 5 ಉಗ್ರರ ಸಾವು

   ಕಾಶ್ಮೀರದಲ್ಲಿ ಎರಡು ದಿನಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ 9 ಮಂದಿ ಉಗ್ರರನ್ನು ಸದೆಬಡಿಯಲಾಗಿತ್ತು. ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ರೆಬನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯ ಮೇರೆಗೆ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು.

   ಈ ಸಮಯದಲ್ಲಿ ಉಗ್ರರು ಗುಂಡಿನ ಚಕಮಕಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ 5 ಉಗ್ರರು ಸಾವನ್ನಪ್ಪಿದ್ದರು, ಬಳಿಕ ಮರುದಿನ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಹತ್ಯೆಮಾಡಲಾಗಿತ್ತು.

   English summary
   Four Terrorists have been gunned down in two separate encounters in Kulgam and Anantnag In Jammu And Kashmmir.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X