ಕಾಶ್ಮೀರದ ಗಡಿಯಲ್ಲಿ ಪಾಕ್‌ನಿಂದ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ, ಮೇ 2: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ, ಶನಿವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.

ಬಾರಾಮುಲ್ಲಾ ಜಿಲ್ಲೆಯ ರಾಮ್ಪುರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿತ್ತು ಎಂದು ರಕ್ಷಣಾ ವಕ್ತಾರ ಕಲೊನೆಲ್ ರಾಜೇಶ್ ಕಾಲಿಯಾ ಅವರು ತಿಳಿಸಿದ್ದರು.

2 Soldiers Die Of Injuries As Pak Violates Ceasefire

ಗಡಿ ನಿಯಂತ್ರಣ ರೇಖೆ ಬಳಿ ಶುಕ್ರವಾರ ರಾತ್ರಿ ಪಾಕಿಸ್ತಾನ ಉದ್ಧಟನತ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಪಾಕ್ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.

ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು. ಈ ಪೈಕಿ ಇದೀಗ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+