• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ

|

ಶ್ರೀನಗರ, ಅಕ್ಟೋಬರ್ 1: ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಬಳಿ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಪಾಕಿಸ್ತಾನ ಪಡೆಗಳು ಅಪ್ರಚೋದಿತ ಮತ್ತು ಮನಸೋಚ್ಛೆ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕದನ ವಿರಾಮ ಉಲ್ಲಂಘಿಸಿದ ಪಾಕ್: ಒಬ್ಬ ಭಾರತೀಯ ಯೋಧ ಹುತಾತ್ಮ

ಬುಧವಾರ ಸಂಜೆ 6.45ರ ಸುಮಾರಿಗೆ ಪಾಕ್ ಪಡೆಗಳು ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಮಾತ್ರವಲ್ಲದೆ, ಮಾನ್‍ಕೋಟ್ ಸೆಕ್ಟರ್‌ನಲ್ಲಿ ಮಾರ್ಟಾರ್‌ಗಳೊಂದಿಗೆ ತೀವ್ರವಾದ ಶೆಲ್ ದಾಳಿ ನಡೆಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಪಾಕ್‍ ನ ಗುಂಡಿನ ದಾಳಿಗೆ ಭಾರತೀಯ ಸೇನೆ, ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.

ಕುಪ್ವಾರಾದ ನೌಗಮ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯಲ್ಲಿ ಮುಂಜಾನೆ ಪಾಕಿಸ್ತಾನ ಪಡೆಗಳು ಮುನ್ನೆಲೆ ಸೇನಾ ಶಿಬಿರಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿವೆ ಎಂದು ವಕ್ತಾರರಾದ ಕರ್ನಲ್ ರಾಜೇಶ್ ಕಾಲಿಯಾ ಯುಎನ್‌ಐಗೆ ತಿಳಿಸಿದ್ದಾರೆ.

ಮಾನ್‍ಕೋಟ್ ಸೆಕ್ಟರ್‌ನಲ್ಲಿಯೂ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಕದನ ವಿರಾಮವನ್ನು ಉಲ್ಲಂಘನೆ ಮಾಡಿವೆ.

English summary
Two soldiers were killed and four injured in an unprovoked ceasefire violation by Pakistani troops along the Line of Control (LoC) in Jammu and Kashmir's Naugam sector on Thursday, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X