ಜಮ್ಮು ಕಾಶ್ಮೀರದಲ್ಲಿ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆ
ಕುಲ್ಗಾಮ್(ಜಮ್ಮು ಮತ್ತು ಕಾಶ್ಮೀರ), ಮೇ 22: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪೊರ ಎಂಬಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಭಾರತೀಯ ಸೇನೆಯೆ 34 ಆರ್ ಆರ್ ಮತ್ತು ಎಸ್ ಒಗಿ ತಂಡಗಳು ನಡೆಸಿದ ಜಂಟು ಕಾರ್ಯಾಚರಣೆಯಲ್ಲಿ ಉಗ್ರರನ್ನು ಹೊಡೆದುರುಳಿಸಲಾಗಿದೆ.
ಗೋಪಾಲಪೊರದಲ್ಲಿ ಕೆಲವು ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿತ್ತು.

ಹತ್ಯೆಗೀಡಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರೆಂದು ಮೂಲಗಳು ತಿಳಿಸಿದ್ದು, ಮತ್ತಷ್ಟು ಉಗ್ರರು ಈ ಪ್ರದೇಶದಲ್ಲಿ ಅವಿತಿರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಶನಿವಾರ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆಯ ಯೋಧರು ಯಶಸ್ವಿಯಾಗಿದ್ದರು. ಲೋಕಸಭೆ ಚುನಾವಣೆಯ ಫಲಿತಾಂಶದ ದಿನ ಹಿನ್ನಲೆಯಲ್ಲಿ ದೇಶದಲ್ಲಿ ಉಗ್ರ ಚಟುವಟಿಕೆಗಳು ನಡೆವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.












Click it and Unblock the Notifications