ಹಂದ್ವಾರ್ ಘಟನೆಗೆ ಪ್ರತಿಕಾರ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ, ಮೇ 25: ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಲ್‌ಗಾವ್ ಜಿಲ್ಲೆಯ ಮಂಜ್‌ಗಾಮ್‌ ಎಂಬಲ್ಲಿ ಈ ಘಟನೆ ನಡೆದಿದೆ.

ಹಂದ್ವಾರದಲ್ಲಿ ಇತ್ತೀಚೆಗೆ ಭಯೋತ್ಪಾದಕರ ದಾಳಿಗೆ ಐವರು ಭಾರತೀಯ ಯೋಧರು ಮೃತಪಟ್ಟಿದ್ದರು. ಈ ಘಟನೆಯ ನಂತರ ಭಯೋತ್ಪಾದಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸೋಮವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 'ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಆಂಡ್ ಕಾಶ್ಮೀರ' ಸಂಘಟನೆಯ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಹಂದ್ವಾರ್‌ ಘಟನೆಯ ಪ್ರತಿಕಾರವಾಗಿ ಮೇ 7 ರಂದು ಭದ್ರತಾ ಪಡೆಗಳು ನಡೆಸಿದ ದಾಳಿಗೆ ಹಿಜ್ಬುಲ್ ಮುಜಾಹಿದ್ದಿನ್‌ ಕಮಾಂಡರ್ ಆಗಿದ್ದ ರಿಯಾಜ್ ನೈಕೂ ಕೂಡ ಹತನಾಗಿದ್ದ.

2 Terrorists Killed In Encounter At Jammu And Kashmir

34 ನ್ಯಾಷನಲ್ ರೈಪಲ್ಸ್, ಸಿಆರ್‌ಪಿಎಫ್‌ ಯೋಧರು ಹಾಗೂ ಕುಲ್‌ಗಾವ್‌ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಉಗ್ರರಿಂದ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಎಎನ್‌ಐ ಗೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+