ಪುಲ್ವಾಮಾದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ಡಿಸೆಂಬರ್ 09: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ದಕ್ಷಿಣ ಕಾಶ್ಮೀರದಲ್ಲಿ ತಲೆ ಮರೆಸಿಕೊಂಡ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.ಸೋಮವಾರ ಸಂಜೆ ಶೋಪಿಯಾನ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ವಾಹನವೊಂದನ್ನು ನಿಲ್ಲಿಸಲು ಭದ್ರತಾ ಪಡೆಗಳು ಸೂಚಿಸಿವೆ.

ಆದರೆ ವೇಗವಾಗಿ ಬರುತ್ತಿದ್ದ ಕಾರು ಚೆಕ್ ಪೋಸ್ಟ್ ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ನಂತರ ಉಗ್ರರು ಕಾರನ್ನು ಸ್ವಲ್ಪ ದೂರದಲ್ಲಿ ಬಿಟ್ಟು, ಫೈರ್ ಮಾಡಿ ಪರಾರಿಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಘಟನೆಯ ವೇಳೆ ಭದ್ರತಾ ಪಡೆಯ ಯೋಧನ ರೈಫಲ್ ಆಕಸ್ಮಿಕವಾಗಿ ಆಫ್ ಆಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ತಪಾಸಣೆ ಇಬ್ಬರು ಉಗ್ರರು ತಪ್ಪಿಸಿಕೊಂಡ ನಂತರ ಭದ್ರತಾ ಪಡೆಗಳು ಸೋಮವಾರ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.












Click it and Unblock the Notifications