ಶೋಪಿಯಾನ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಸೇನೆ
ಜಮ್ಮು ಮತ್ತು ಕಾಶ್ಮೀರ, ಮೇ 12: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎನ್ ಕೌಂಟರ್ ನಡೆದ ಸ್ಥಳದಿಂದ ಶಾಸ್ತ್ರಾಸ್ತ್ರಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೊಪಿಯಾನ್ ಜಿಲ್ಲೆಯ ಹಿಂಡ್ಸಿತಾಪುರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಸೇನಾಪಡೆ ಎನ್ ಕೌಂಟರ್ ನಡೆಸಿ ಇಬ್ಬರು ಭಯೋತ್ಪಾದಕರನ್ನು ಕೊಂದು ಹಾಕಿದೆ ಎಂಬ ಮಾಹಿತಿ ಲಭ್ಯವಾಗಿದೆ.












Click it and Unblock the Notifications