ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಶ್ರೀನಗರ, ಮಾರ್ಚ್ 29: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ನಲ್ಲಿ ಶುಕ್ರವಾರ ನಡೆದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸಿಯಾಗಿದೆ.

ನೀ ಘಟನೆಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಅತ್ತ ಕಣಿವೆ ರಾಜ್ಯದ ಕೃಷ್ಣ ಘಾಟಿಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದ್ದು, ಭಾರತ ಪ್ರತಿದಾಳಿ ನಡೆಸುತ್ತಿದೆ. ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

2 terrorists killed in Jammu and Kashmir

ಗುರುವಾರ ಬೆಳಿಗ್ಗೆ ಜಮ್ಮು ಕಾಶ್ಮೀರದ ಶೋಪಿಯಾನ್ ನ ಕೆಲ್ಲಾರ್ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಸಿಆರ್ ಪಿಎಫ್, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ದಾಳಿ ನಡೆಸಿ, ಮೂವರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಳೆದ ಮಾರ್ಚ್ 22 ರಂದು ಜಮ್ಮುಮತ್ತು ಕಾಶ್ಮೀರದ ಬಂಡಿಪೊರದ ಹಾಜಿನ್ ಎಂಬಲ್ಲಿ ಭಾರತೀಯ ಸೇನೆ ಮೂವರು ಭಯೋತ್ಪಾದಕರನ್ನು ಹತ್ಯೆಗೈದಿತ್ತು. ಪುಲ್ವಾಮಾದಲ್ಲಿ ನಲವತ್ತಕ್ಕೂ ಹೆಚ್ಚು ಭಾರತೀಯ ಯೋಧರನ್ನು ಜೈಷ್ ಇ ಮೊಹಮ್ಮದ್ ಉಗ್ರನೊಬ್ಬ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಹತ್ಯೆಗೈದ ನಂತರ ಭಾರತ, ಪಾಕಿಸ್ತಾನದ ಭಯೋತ್ಪಾದಕ ನೆಲೆಯ ಮೇಲೆ ದಾಳಿ ನಡೆಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+