ಜಮ್ಮು ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಯೋಧರು
ಶ್ರೀನಗರ, ಅಕ್ಟೋಬರ್ 10: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ.
ಕುಲ್ಗಾಂ ಜಿಲ್ಲೆಯ ಚಿಂಗಾಮ್ ಎಂಬ ಪ್ರದೇಶದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು.
ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಇದರಂತೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಇದೀಗ ಕಾರ್ಯಾಚರಣೆ ಮುಂದುವರೆದಿದೆ. ಕುಲ್ಗಾಂನ ಚಿಂಗಂ ಪ್ರದೇಶದಲ್ಲಿ ಘಟನೆ ನಡೆದಿದೆ.
ಅಕ್ಟೋಬರ್ 2 ರಂದು ಎಲ್‌ಒಸಿಯಲ್ಲಿ ಪಾಕಿಸ್ತಾನ ಗುಂಡಿನ ದಾಳಿ ನಡೆಸಿತ್ತು.ಈ ಭಾಗದಲ್ಲಿ ಪಾಕಿಸ್ತಾನ ಪಡೆಗಳು ತೀವ್ರ ಸ್ವರೂಪದಲ್ಲಿ ಫಿರಂಗಿ ಗುಂಡುಗಳು, ಮೋರ್ಟಾರ್‌ಗಳು ಹಾಗೂ ಇತರೆ ಶಸ್ತ್ರಾಸ್ತ್ರಗಳನ್ನು ಪ್ರಯೋಗಿಸಿವೆ.
ಪ್ರತಿವರ್ಷವೂ ಹಿಮಪಾತ ಸಂಭವಿಸುವ ಮುನ್ನ ಪಾಕಿಸ್ತಾನವು ಗಡಿಯುದ್ಧಕ್ಕೂ ಉಗ್ರರನ್ನು ಕಳುಹಿಸುತ್ತದೆ. ಈ ವರ್ಷ ಕೂಡ ಅದು ನಡೆದಿದೆ. ಗುರೆಜ್ ಮತ್ತು ಬಂಡಿಪೊರಾ ವಲಯಗಳಲ್ಲಿ ಒಳನುಸುಳುವಿಕೆ ಬಗ್ಗೆ ನಮಗೆ ಮಾಹಿತಿ ದೊರಕಿದೆ.
ಈ ಭಾಗಗಳಲ್ಲಿ ಸೇನೆ ಕೂಡ ಸಂಪರ್ಕವನ್ನು ಬಲಪಡಿಸಿದೆ. ಗಡಿಗೆ ಸಮೀಪದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳು ದೊರೆತಿವೆ.












Click it and Unblock the Notifications