• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಂದ್ವಾರದಲ್ಲಿ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ

|

ಹಂದ್ವಾರ, ಮಾರ್ಚ್ 01: ಪಾಕ್ ಸೇನೆಯು ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಇದೀಗ ಭಾರತೀಯ ಯೋಧರ ಗುಂಡೇಟಿಕೆ ಹಂದ್ವಾರದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಅಭಿನಂದನ್ ಬಿಡುಗಡೆ LIVE: ವಿಂಗ್ ಕಮಾಂಡರ್ ಆಗಮನಕ್ಕೆ ಕ್ಷಣಗಣನೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರ ವಿರುದ್ಧ ಭಾರತೀಯ ಯೋಧರು ಆಪರೇಷನ್ ಆಲೌಟ್ ಕಾರ್ಯಾಚರಣೆ ಕೈಗೊಂಡಿದ್ದು ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಹಾಕುತ್ತಿದ್ದಾರೆ.

ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಭಾರತೀಯ ಯೋಧರ ವಿರುದ್ಧ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಕೆಲ ಗಂಟೆಗಳ ಕಾಲ ಶಾಂತವಾಗಿದ್ದ ಪ್ರದೇಶದಲ್ಲಿ ಮತ್ತೀಗ ಗುಂಡಿನ ದಾಳಿ ಆರಮಭವಾಗಿದೆ.ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕ್ ಸೇನೆ ಗುಂಡಿನ ದಾಳಿ ನಡೆಸುತ್ತಿದೆ. ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆಯುತ್ತಿದೆ.

English summary
Two terrorists were killed in an overnight encounter at Babagund village of Langate, Handwara in north Kashmir's Kupwara district. The bodies of the slain have been recovered from the spot on Friday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X