ವಿಧಿ 370 ರದ್ದಾದ ಬಳಿಕ ಪಾಕ್‌ನಿಂದ 222 ಬಾರಿ ಕದನ ವಿರಾಮ ಉಲ್ಲಂಘನೆ
Recommended Video
ಶ್ರೀನಗರ, ಆಗಸ್ಟ್ 30: ನರೇಂದ್ರ ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನ 370ನೇ ವಿಧಿ ರದ್ದುಗೊಳಿಸಿದ ಬಳಿಕ ಇಲ್ಲಿಯವರೆಗೆ 222 ಬಾರಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿದೆ.
ವರ್ಷದಲ್ಲಿ 1,900 ಬಾರಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿದ್ದು ಕೇವಲ ಒಂದು ತಿಂಗಳಲ್ಲಿ 222 ಬಾರಿ ಉಲ್ಲಂಘಿಸಿದೆ.
ಹಾಗೆಯೇ ಭಾರತ ಪಾಕಿಸ್ತಾನ ಗಡಿಯಲ್ಲಿ ಉಗ್ರರು ಭಾರತದ ಕಡೆ ನುಸುಳಲು ಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಶೆಲ್ಲಿಂಗ್ ನಡೆದಿದ್ದು ನಮ್ಮ ಯೋಧರೂ ಕೂಡ ಅದಕ್ಕೆ ತಕ್ಕೆ ಉತ್ತರ ಕೊಟ್ಟಿದ್ದಾರೆ.

ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಹೆಚ್ಚು ಸೈನಿಕರನ್ನು ನಿಯೋಜಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜುಲೈನಲ್ಲಿ ಕೂಡ 296ಕ್ಕೂ ಹೆಚ್ಚು ಕದನ ವಿರಾಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಜಮ್ಮು ಕಾಶ್ಮೀರದಲ್ಲಿ ನೆಲೆಸಿರುವ ಶಾಂತಿಯನ್ನು ಕದಡಲು ಪಾಕಿಸ್ತಾನ ಪ್ರಯತ್ನಿಸುತ್ತಿದ್ದು, ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಒಲಾಖೆ ಮಾಹಿತಿ ನೀಡಿದೆ.
ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಸಂಘಟನೆ ಉಗ್ರರು ಜಮ್ಮು ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.
ಮಾಹಿತಿ ಪ್ರಕಾರ ಶಾಲೆ, ಸರ್ಕಾರಿ ಕಟ್ಟಡಗಳು ಹಾಗೂ ಸೈನಿಕರ ಮೇಲೆ ದಾಳಿ ನಡೆಸಲು ಸಿದ್ಧರಾಗಿದ್ದಾರೆ. ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪಾಕಿಸ್ತಾನವು ಭಾರತದ ಮೇಲೆ ದಾಳಿ ನಡೆಸಲು ಯತ್ನ ನಡೆಸುತ್ತಿದೆ.












Click it and Unblock the Notifications