ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದಲ್ಲಿ ಒಂದೇ ವಾರದಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆ

|
Google Oneindia Kannada News

ಶ್ರೀನಗರ, ಆಗಸ್ಟ್ 2: ಒಂದೇ ವಾರದಲ್ಲಿ ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ 28 ಸಾವಿರ ಸೈನಿಕರನ್ನು ನಿಯೋಜನೆ ಮಾಡಲಾಗಿದೆ.

ಒಂದು ವಾರದ ಹಿಂದಷ್ಟೇ 10 ಸಾವಿರ ಸೈನಿಕರನ್ನು ನಿಯೋಜನೆ ಮಾಡಲಾಗಿತ್ತು. ಇದೀಗ ಮತ್ತೆ 25 ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ.

ಕಾಶ್ಮೀರ ಲೂಟಿಕೋರರನ್ನು ಕೊಲೆ ಗೈಯಿರಿ, ಭಯೋತ್ಪಾದಕರಿಗೆ ರಾಜ್ಯಪಾಲರ ಕರೆಕಾಶ್ಮೀರ ಲೂಟಿಕೋರರನ್ನು ಕೊಲೆ ಗೈಯಿರಿ, ಭಯೋತ್ಪಾದಕರಿಗೆ ರಾಜ್ಯಪಾಲರ ಕರೆ

ಹಾಗಾದರೆ ಗಡಿಯಲ್ಲಿ ಏನಾದರೂ ಆಪತ್ತು ಕಾದಿದೆಯೇ ಎನ್ನುವುದರ ಬಗ್ಗೆಯೂ ಆಲೋಚಿಸಬೇಕಿದೆ.ವಾರಗಳ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 2 ದಿನಗಳ ಕಾಶ್ಮೀರ ಭೇಟಿಯಲ್ಲಿದ್ದರು.

25000 More Soldiers Being Moved to Kashmir

ದೋವಲ್ ಹಿಂದಿರುಗಿದ ಬಳಿಕ ಈ ಬೆಳವಣಿಗೆಗಳು ನಡೆದಿದ್ದು, ಕುತೂಹಲ ಕೆರಳಿಸಿದೆ. ಇನ್ನು ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ಸಂಬಂಧಿಸಿದ ಕಲಂ 370 ಮತ್ತು 35ಎ ಕುರಿತಂತೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಈ ನಡೆ ಅಚ್ಚರಿ ಮೂಡಿಸಿದೆ.

ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕರು, ಉತ್ತರ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಸಂಖ್ಯೆ ತೀರಾ ಕಡಿಮೆ ಇದ್ದು, ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಇನ್ನು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಕೂಡ ಭೇಟಿ ನೀಡಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅಷ್ಟು ಮಾತ್ರವಲ್ಲದೆ ಇಂದು ಮತ್ತು ನಾಳೆ ಅಂದರೆ 2 ದಿನಗಳ ಕಾಲ ಕಾಶ್ಮೀರದಲ್ಲೇ ಉಳಿದು ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಆದರೆ ಇದಕ್ಕೆ ಯಾವುದೇ ಕಾರಣಗಳನ್ನು ಸೇನೆಯಾಗಲಿ, ಸರ್ಕಾರವಾಗಲಿ ನೀಡಿಲ್ಲ. ಮೂಲಗಳ ಪ್ರಕಾರ ಅಮರನಾಥ ಯಾತ್ರಾರ್ಥಿಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಆದರೂ ಇಷ್ಟೊಂದು ಸೈನಿಕರನ್ನುಅಮರನಾಥ ಯಾತ್ರೆಗೆ ನಿಯೋಜಿಸಿದ ಉದಾಹರಣೆಗಳೇ ಇಲ್ಲ ಎಂದು ತಿಳಿದುಬಂದಿದೆ. ಇನ್ನು ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.

English summary
28000 More Soldiers Being Moved to Kashmir, Less than a week after moving 10,000 troops of paramilitary forces to Kashmir, the centre is rushing about 28,000 more paramilitary personnel to the Valley.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X