ಜಮ್ಮು ಕಾಶ್ಮೀರ: 3 ಎಲ್‌ಇಟಿ ಉಗ್ರರನ್ನು ಬಂಧಿಸಿದ ಭಾರತೀಯ ಸೇನೆ
ರಜೌರಿ, ಸೆಪ್ಟೆಂಬರ್ 19: ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ರಜೌರಿಯಲ್ಲಿ ಮೂವರು ಎಲ್‌ಇಟಿ ಉಗ್ರರನ್ನು ಬಂಧಿಸಿದೆ.
ಜಮ್ಮುವಿನ ರಜೌರಿ ಜಿಲ್ಲೆಯಲ್ಲಿ ಉಗ್ರರ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆ ಜಂಟಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದರಂತೆ ಇದೀಗ ಮೂವರು ಉಗ್ರರನ್ನು ಸೇನಾಪಡೆ ಬಂಧನಕ್ಕೊಳಪಡಿಸಿದ್ದು, ಉಗ್ರರ ಬಳಿಯಿದ್ದ 2 ಎಕೆ 56 ರೈಫಲ್ಸ್ ಗಳು, 2 ಪಿಸ್ತೂಲ್, 4 ಗ್ರೆನೇಡ್, ರೂ.1 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.












Click it and Unblock the Notifications