• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು : ಮೂವರು ಉಗ್ರರ ಹತ್ಯೆ

|

ಶ್ರೀನಗರ, ಜೂನ್ 16: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ 3 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಟುರ್ಕ್ ವಂಗಮ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಅಪರಿಚಿತ ಉಗ್ರರನ್ನು ಹತ್ಯೆಗೈಯುವಲ್ಲಿ ಭಾರತೀಯ ಸೇನೆ ಯೋಧರು ಯಶಸ್ವಿಯಾಗಿದ್ದಾರೆ. ಸದ್ಯ ಅಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ ಓರ್ವ ನಾಗರಿಕನಿಗೆ ಗಾಯ

ಶ್ರೀನಗರದಿಂದ 60 ಕಿ.ಮೀ ದೂರದಲ್ಲಿರುವ ಶೋಫಿಯಾನಾ ಜಿಲ್ಲೆಯ ತುರ್ಕವಾಂಗಂ ಭಾಗದಲ್ಲಿ ರಾಷ್ಟ್ರೀಯ ರೈಫಲ್ಸ್​ ಹಾಗೂ ಭಯೋತ್ಪಾದಕರ ನಡುವೆ ಬೆಳಗ್ಗೆ ಐದು ಗಂಟೆ ಸುಮಾರಿ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಕಾರ್ಯಾಚರಣೆ ತಂಡ ಕೇಂದ್ರ ಮೀಸಲು ಪಡೆ ನಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಮುಂಜಾನೆ 6:30ರ ಸುಮಾರಿಗೆ ಕಾರ್ಯಾಚರಣೆ ಪೂರ್ಣಗೊಂಡಿದೆ.

ಜಮ್ಮು ಕಾಶ್ಮೀರದಲ್ಲಿ ಇಂದು ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂಲಕ ಕೇವಲ ಎರಡು ವಾರಗಳಲ್ಲಿ 14 ಭಯೋತ್ಪಾದಕರನ್ನು ಸೇನೆ ಹತ್ಯೆ ಮಾಡಿದಂತಾಗಿದೆ.

ಈ ಬಗ್ಗೆ ಕಾಶ್ಮೀರ ಪೊಲೀಸರು ಟ್ವೀಟ್​ ಮಾಡಿ ಮಾಹಿತಿ ನೀಡಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಈ ಮೂಲಕ ಕಣಿವೆ ರಾಜ್ಯವನ್ನು ಉಗ್ರ ಮುಕ್ತವನ್ನಾಗಿ ಮಾಡುವ ಕಾರ್ಯಾಚರಣೆ ಮುಂದುವರಿದಿದೆ.

English summary
Shopian encounter, One INSAS aND tWO ak-47 Rifles were recovered from the encunter site,police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X