ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ
ಶ್ರೀನಗರ, ಜೂನ್ 29: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಸೋಮವಾರ ಬೆಳಗಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆಮಾಡಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಉಗ್ರನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ. ಸೋಮವಾರ ನಸುಕಿನಲ್ಲಿ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರು ಮುಖಾಮುಖಿಯಾಗಿದ್ದು, ಎನ್ಕೌಂಟರ್ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಗ್ರರು ಭದ್ರತಾ ಪಡೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ ಶುರುಮಾಡಿದ ಕಾರಣ ಭದ್ರತಾಪಡೆಯವರು ಪ್ರತಿದಾಳಿ ನಡೆಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ ಕೌಲ್ ಚೋಹರ್ ಎಂಬಲ್ಲಿ ಭದ್ರತಾ ಪಡೆ ಸಿಬ್ಬಂದಿ ಕಟ್ಟುನಿಟ್ಟಿನ ಶೋಧ ಕಾರ್ಯ ಆರಂಭಿಸಿದ್ದರು. ಇದು ಉಗ್ರರ ಅಡಗುದಾಣಕ್ಕೆ ಸಮೀಪವೇ ಆಗಿದ್ದರಿಂದ ಅಲ್ಲಿಂದ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಉಗ್ರರು ಮಾಡಿದ್ದಾರೆ. ಆಗ ಎನ್ಕೌಂಟರ್ ಸಂಭವಿಸಿದೆ. ಇದರಲ್ಲಿ ಮೂವರು ಉಗ್ರರು ಹತರಾಗಿದ್ದು, ಅವರ ಗುರುತು ವಿವರಗಳು ಮತಷ್ಟು ಲಭ್ಯವಾಗಬೇಕಾಗಿದೆ.
ಭದ್ರತಾ ಪಡೆಗಳಿಗೆ ಉಗ್ರರು ಅಲ್ಲಿರುವ ಖಚಿತ ಮಾಹಿತಿ ಸಿಕ್ಕಿದ ಕಾರಣವೇ ಕಟ್ಟುನಿಟ್ಟಿನ ಶೋಧ ಕಾರ್ಯವನ್ನು ಅವರು ಕೈಗೊಂಡಿದ್ದರು.












Click it and Unblock the Notifications