ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ

|
Google Oneindia Kannada News

ಶ್ರೀನಗರ, ಜೂನ್ 29: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಸೋಮವಾರ ಬೆಳಗಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆಮಾಡಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ. ಸೋಮವಾರ ನಸುಕಿನಲ್ಲಿ ಅನಂತನಾಗ್​ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರು ಮುಖಾಮುಖಿಯಾಗಿದ್ದು, ಎನ್​ಕೌಂಟರ್ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದ ತ್ರಾಲ್‌ನಲ್ಲಿ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆಜಮ್ಮು-ಕಾಶ್ಮೀರದ ತ್ರಾಲ್‌ನಲ್ಲಿ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆ

ಉಗ್ರರು ಭದ್ರತಾ ಪಡೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ ಶುರುಮಾಡಿದ ಕಾರಣ ಭದ್ರತಾಪಡೆಯವರು ಪ್ರತಿದಾಳಿ ನಡೆಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Encounter Breaks Out At Jammu And Kashmir’s Anantnag

ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ ಕೌಲ್​ ಚೋಹರ್​ ಎಂಬಲ್ಲಿ ಭದ್ರತಾ ಪಡೆ ಸಿಬ್ಬಂದಿ ಕಟ್ಟುನಿಟ್ಟಿನ ಶೋಧ ಕಾರ್ಯ ಆರಂಭಿಸಿದ್ದರು. ಇದು ಉಗ್ರರ ಅಡಗುದಾಣಕ್ಕೆ ಸಮೀಪವೇ ಆಗಿದ್ದರಿಂದ ಅಲ್ಲಿಂದ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಉಗ್ರರು ಮಾಡಿದ್ದಾರೆ. ಆಗ ಎನ್​ಕೌಂಟರ್ ಸಂಭವಿಸಿದೆ. ಇದರಲ್ಲಿ ಮೂವರು ಉಗ್ರರು ಹತರಾಗಿದ್ದು, ಅವರ ಗುರುತು ವಿವರಗಳು ಮತಷ್ಟು ಲಭ್ಯವಾಗಬೇಕಾಗಿದೆ.

ಭದ್ರತಾ ಪಡೆಗಳಿಗೆ ಉಗ್ರರು ಅಲ್ಲಿರುವ ಖಚಿತ ಮಾಹಿತಿ ಸಿಕ್ಕಿದ ಕಾರಣವೇ ಕಟ್ಟುನಿಟ್ಟಿನ ಶೋಧ ಕಾರ್ಯವನ್ನು ಅವರು ಕೈಗೊಂಡಿದ್ದರು.

English summary
An encounter broke out between the security forces and militants in Jammu and Kashmir’s Anantnag district on Monday, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X