• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

|

ಶ್ರೀನಗರ, ಜೂನ್ 10: ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಳ್ಳಿಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಮುಂಜಾನೆ 1.30 ರ ಸುಮಾರಿಗೆ ಆರ್ಮಿ ಪೋಲಿಸ್ ಮತ್ತು ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (CRPF) ಗ್ರಾಮವೊಂದರಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಬಳಿಕ ಕಾರ್ಯಾಚರಣೆಗಿಳಿದು ಎನ್‌ಕೌಂಟರ್ ಮಾಡಲಾಗಿದೆ.

ಬರಾಮುಲ್ಲ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಆತಂಕ

ಈ ಭಯೋತ್ಪಾದಕರು ಸುಗೂ ಗ್ರಾಮದ ಮನೆಯೊಳಗೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರದ ನಂತರ ಇದು ಮೂರನೇ ಎನ್‌ಕೌಂಟರ್ ಆಗಿದೆ.

ಕಳೆದ 15 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳ 8 ಮಂದಿ ಉನ್ನತ ಕಮಾಂಡರ್‌ಗಳು ಸೇರಿದಂತೆ 22 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

English summary
Three terrorists were killed in a gunbattle between the security forces and terrorists at a village in Jammu and Kashmir’s Shopian district on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X