ಜಮ್ಮು-ಕಾಶ್ಮೀರದ ತ್ರಾಲ್‌ನಲ್ಲಿ ಮೂವರು ಉಗ್ರರ ಹತ್ಯೆಗೈದ ಸೇನೆ

ಜಮ್ಮು ಮತ್ತು ಕಾಶ್ಮೀರ, ಫೆಬ್ರವರಿ 19: ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಸೇನೆಯು ಮೂವರು ಉಗ್ರರನ್ನು ಜಮ್ಮು ಕಾಶ್ಮೀರದ ತ್ರಾಲ್‌ನಲ್ಲಿ ಹೊಡೆದುರುಳಿಸಿದೆ.

ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತ್ರಾಲ್​ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದಾರೆ ಎಂಬ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೇರೆಗೆ, ಭದ್ರತಾ ಪಡೆಯು ರಾಷ್ಟ್ರೀಯ ರೈಫಲ್ಸ್​ ಮತ್ತು ಸಿಆರ್​ಪಿಎಫ್​​ ಮಂಗಳವಾರ ಸಂಜೆ ಜಂಟಿ ಶೋಧ ಕಾರ್ಯಾಚರಣೆ ನೆಡಸಿತ್ತು.

3 Terrorists Killed In Encounter With Forces In Jammu And Kashmir

ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹತ್ಯೆಗೀಡಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ.ಹತ್ಯೆಯಾದ ಮೂವರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಉಗ್ರರೆಲ್ಲರೂ ಸ್ಥಳೀಯರೇ ಎಂಬುದು ಸಾಬೀತಾಗಿದೆ. ಭಯೋತ್ಪಾದಕರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+