ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೂವರೆ ವರ್ಷಗಳ ನಂತರ ಮತ್ತೆ 4ಜಿ ಸಂಪರ್ಕ

|
Google Oneindia Kannada News

ಶ್ರೀನಗರ,ಫೆಬ್ರವರಿ 05: ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೂವರೆ ವರ್ಷದ ಬಳಿಕ ಮತ್ತೆ 4ಜಿ ಸಂಪರ್ಕವನ್ನು ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈಸ್ಪೀಡ್ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗುತ್ತಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

ಗೃಹ ಸಚಿವರಿಂದ ಜಮ್ಮು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಕಾಯ್ದೆ ಮಂಡನೆಗೃಹ ಸಚಿವರಿಂದ ಜಮ್ಮು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಕಾಯ್ದೆ ಮಂಡನೆ

ಕಳೆದ ವರ್ಷದಲ್ಲಿ, ಬ್ರಾಡ್ಬ್ಯಾಂಡ್ ಇಂಟರ್ನೆಟ್ ಮತ್ತು ನಿಧಾನಗತಿಯ ಮೊಬೈಲ್ ಡೇಟಾವನ್ನು ಹಂತ ಹಂತವಾಗಿ ಪುನಃಸ್ಥಾಪಿಸಲಾಯಿತು.ತಪ್ಪು ಮಾಹಿತಿ ಹರಡುವುದನ್ನು ಮತ್ತು ಭಯೋತ್ಪಾದಕರು ನೆಟ್‌ವರ್ಕ್‌ಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ ಎಂದು ಆಡಳಿತ ತಿಳಿಸಿದೆ.ಆದಾಗ್ಯೂ, ಈ ನಿರ್ಬಂಧಗಳಿಂದಾಗಿ ಲಕ್ಷಾಂತರ ಉದ್ಯೋಗಗಳು ಮತ್ತು ಆರ್ಥಿಕತೆಗೆ ನಷ್ಟವಾಗಿದೆ ಎಂದು ತಜ್ಞರು ಹೇಳಿದ್ದಾರೆ.

4G Internet Being Restored Across Jammu And Kashmir After 18 Months

4 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದಲ್ಲಿ ಮರುಸ್ಥಾಪಿಸಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತ ವಕ್ತಾರ ರೋಹಿತ್ ಕನ್ಸಾಲ್ ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರವನ್ನು 2019 ರ ಆಗಸ್ಟ್ 5 ರಂದು ವಿಶ್ವದಲ್ಲೇ ಅತಿ ಧೀರ್ಘ ಕಾಲ ಪ್ರಜಾಪ್ರಭುತ್ವ ದೇಶವೊಂದರ ಪ್ರದೇಶದಲ್ಲಿ ಇಂಟರ್ನೆಟ್ ನ್ನು ಸ್ಥಗಿತಗೊಳಿಸಲಾಗಿತ್ತು.
ಸಂವಿಧಾನದಲ್ಲಿ ಪಟ್ಟಿ ಮಾಡಲಾದ ತನ್ನ ದಶಕಗಳಷ್ಟು ಹಳೆಯ ಸ್ವಾಯತ್ತತೆಯನ್ನು ರದ್ದುಗೊಳಿಸುವ ಯೋಜನೆಯನ್ನು ಕೇಂದ್ರ ಘೋಷಿಸಿದ ನಂತರ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು.

ನಂತರದ ದಿನಗಳಲ್ಲಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ, ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು ಮತ್ತು ಮೂವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ರಾಜಕಾರಣಿಗಳನ್ನು ಬಂಧನಕ್ಕೆ ಒಳಗಾಗಿದ್ದರು.

English summary
High speed 4G internet services are being restored across Jammu and Kashmir, a senior government official said on Friday, more than 18 months after they were snapped to prevent a backlash against the centre's move to revoke the former state's special status.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X