ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್: 5 ಉಗ್ರರ ಸಾವು
ಶ್ರೀನಗರ, ಜೂನ್ 7: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಐವರುಉಗ್ರರು ಬಲಿಯಾಗಿದ್ದಾರೆ.
ಮೃತ ಉಗ್ರರ ಗುರುತು ಮತ್ತು ಅವರು ಯಾವ ಗುಂಪಿನೊಂದಿಗೆ ಸಂಬಂಧ ಹೊಂದಿದ್ದರು ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ರೆಬನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯ ಮೇರೆಗೆ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಮಯದಲ್ಲಿ ಉಗ್ರರು ಗುಂಡಿನ ಚಕಮಕಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಮೂವರು ಉಗ್ರರು ಸಾವನ್ನಪ್ಪಿದ್ದರು ಎಂದು ತಿಳಿಸಿದ್ದಾರೆ.

ಉಗ್ರರು ಅಡಗಿ ಕುಳಿತಿದ್ದ ಮಾಹಿತಿ ಪಡೆದ ಭದ್ರತಾ ಪಡೆ ತೀವ್ರ ಶೋಧ ನಡೆಸಿತ್ತು, ಬಳಿಕ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿತ್ತು.












Click it and Unblock the Notifications