ಜಮ್ಮು-ಕಾಶ್ಮೀರ: ಎನ್ ಕೌಂಟರ್ ದಾಳಿಗೆ 6 ಉಗ್ರರ ಹತ್ಯೆ
ಅನಂತ್ ನಾಗ್, ನವೆಂಬರ್ 23: ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ 6 ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಶುಕ್ರವಾರ ಬೆಳಗ್ಗಿನ ಜಾವ ರಾಜಧಾನಿ ಶ್ರೀನಗರದಿಂದ 50 ಕಿ.ಮೀ.ದೂರದಲ್ಲಿರುವ ಸೆಕಿಪೊರಾ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇಲೆ ಭಾರತೀಯ ಸೇನೆ ದಾಳಿ ನಡೆಸಿತ್ತು.
ಮುನ್ನೆಚ್ಚರಿಕೆಯ ದೃಷ್ಟಿಯಿಂದ ಅನಂತ್ ನಾಗ್ ಜಿಲ್ಲೆಯಲ್ಲಿ ಮೊಬೈಲ್ ನೆಟ್ ವರ್ಕ್ ಅನ್ನು ಸ್ಥಗಿತಗೊಳಿಸಲಾಗಿದೆ. ಭದ್ರತಾ ಸಿಬ್ಬಂದಿ ಉಗ್ರರು ಅಡಗಿರುವ ನೆಲೆಯನ್ನು ಸುತ್ತುವರಿಯುತ್ತಿದ್ದಂತೆಯೇ ಉಗ್ರರೇ ಗುಂಡಿನ ದಾಳಿ ಆರಂಭಿಸಿದ್ದರು. ಆಗ ಅನಿವಾರ್ಯವಾಗಿ ಸೇನಾ ಸಿಬ್ಬಂದಿ ಎನ್ ಕೌಂಟರ್ ದಾಳಿ ಆರಂಭಿಸಬೇಕಾಯ್ತು ಎಂದು ಮೂಲಗಳು ತಿಳಿಸಿವೆ.

ಮೂರು ದಿನಗಳ ಹಿಂದಷ್ಟೇ ಶೊಪಿಯಾನ್ ನಲ್ಲಿ ನಾಲ್ವರು ಉಗ್ರರನ್ನು ಎನ್ ಕೌಂಟರ್ ದಾಳಿಯಲ್ಲಿ ಹತ್ಯೆಮಾಡಲಾಗಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದ ಓರ್ವ ಯೋಧ, ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.












Click it and Unblock the Notifications