Breaking; ಜಮ್ಮು ಮತ್ತು ಕಾಶ್ಮೀರ; ಎನ್ಕೌಂಟರ್ನಲ್ಲಿ ಭಯೋತ್ಪಾದಕ ಹತ
ಶ್ರೀನಗರ, ಸೆ. 26: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಬಟ್ಪೋರಾ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಾಗರಿಕರು ಮತ್ತು ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಟ್ಪೋರಾದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಯೋತ್ಪಾದಕರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದಾಗ ಶೋಧ ಕಾರ್ಯಾಚರಣೆ ಎನ್ಕೌಂಟರ್ಗೆ ತಿರುಗಿತು ಎಂದು ಪೊಲೀಸರು ಹೇಳಿದ್ದಾರೆ.
"ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಒಬ್ಬ ಸೇನಾ ಯೋಧ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಎಲ್ಲಾ ಮೂವರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು" ಎಂದು ಪೊಲೀಸ್ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಇಬ್ಬರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಭಯೋತ್ಪಾದಕನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications