Breaking: ಮೆಹಬೂಬಾ ಮುಫ್ತಿ ಸಹೋದರಿಗೆ ಕೋರ್ಟ್ ವಾರಂಟ್
ಶ್ರೀನಗರ , ಆಗಸ್ಟ್ 23: 1989ರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ದಿನಾಂಕದಂದು ನ್ಯಾಯಾಲಯಕ್ಕೆ ಹಾಜರಾಗದಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಟಾಡಾ ನ್ಯಾಯಾಲಯವು ಮಂಗಳವಾರ ರುಬಯ್ಯ ಸಯೀದ್ ವಿರುದ್ಧ ವಾರಂಟ್ ಹೊರಡಿಸಿದೆ.
ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್ ಮಲಿಕ್ ನಡೆಸಿದ್ದ 1989ರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿದೆ.
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಸಹೋದರಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ಅವರನ್ನು ಜೆಕೆಎಲ್ಎಫ್ ಉಗ್ರಗಾಮಿಗಳು ಡಿಸೆಂಬರ್ 8, 1989 ರಂದು ಶ್ರೀನಗರದಲ್ಲಿ ಆಕೆಯನ್ನು ಅಪಹರಿಸಿದ್ದರು. ಪ್ರಕರಣದಲ್ಲಿ ಯಾಸಿನ್ ಮಲಿಕ್ ಅಪರಾಧಿ ಎಂದು ಹೇಳಲಾಗಿತ್ತು. ಐದು ದಿನಗಳ ನಂತರ ಡಿಸೆಂಬರ್ 13 ರಂದು ಕೇಂದ್ರದಲ್ಲಿ ವಿ ಪಿ ಸಿಂಗ್ ಸರ್ಕಾರವು ಐದು ಭಯೋತ್ಪಾದಕರನ್ನು ವಿನಿಮಯವಾಗಿ ಬಿಡುಗಡೆ ಮಾಡಿದ ನಂತರ ಸೆರೆಯಿಂದ ರುಬಯ್ಯ ಅವರನ್ನು ಬಿಡುಗಡೆ ಮಾಡಲಾಯಿತು. ಈ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೂಡ ಇತರರ ಜೊತೆ ಆರೋಪಿಯಾಗಿದ್ದರು.

ಜುಲೈ 15 ರಂದು, 1989ರ ಅಪಹರಣ ಪ್ರಕರಣದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಲು ರುಬಯ್ಯ ಮೊದಲ ಬಾರಿಗೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇಂದಿನ ವಿಚಾರಣೆಗಾಗಿ, '1989' ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಯಾಸಿನ್ ಮಲಿಕ್ ಅವರು ದೈಹಿಕವಾಗಿ ಹಾಜರಾಗಲು ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು.
ಜಮ್ಮುವಿನ ಟಾಡಾ ಕೋರ್ಟ್ ರುಬಯ್ಯ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿತ್ತು. ಕ್ರಾಸ್ ಎಕ್ಸಾಮಿನೇಷನ್‌ಗೆ ಅವರು ಹಾಜರಾಗಬೇಕಾಗಿತ್ತು, ಆದರೆ ಆಕೆ ಬಂದಿಲ್ಲ. ಹೀಗಾಗಿ ನ್ಯಾಯಾಲಯ ಆಕೆಯ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 21ಕ್ಕೆ ಮುಂದೂಡಲಾಗಿದೆ ಎಂದು ಸಿಬಿಐನ ಹಿರಿಯ ವಕೀಲ ಮೋನಿಕಾ ಕೊಹ್ಲಿ ಹೇಳಿದ್ದಾರೆ.
"ಹೈಕೋರ್ಟ್ ಆದೇಶದಲ್ಲಿ, ಯಾಸಿನ್ ಅವರನ್ನು ದೈಹಿಕವಾಗಿ ಕಾಣಿಸಿಕೊಳ್ಳಲು ಅನುಮತಿಸಿಲ್ಲ. ಜಾಮೀನು ನೀಡಬಹುದಾದ ವಾರಂಟ್ ಮೂಲಕ ರುಬಯ್ಯ ಅವರನ್ನು ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗುವುದು ಎಂದು ಸಿಬಿಐ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್ ಕೆ ಭಟ್ ತಿಳಿಸಿದ್ದಾರೆ.

ರುಬಯ್ಯ ಸಯೀದ್ ಅವರ ವಕೀಲ ಅನಿಲ್ ಸೇಥಿ ಅವರು ನಂತರ ನ್ಯಾಯಾಧೀಶರು ಅವರ ಕೋರಿಕೆಯ ಮೇರೆಗೆ ವಾರಂಟ್ ಅನ್ನು ಹಿಂತೆಗೆದುಕೊಂಡಿದ್ದಾರೆ. ನ್ಯಾಯಾಲಯದ ವಿಚಾರಣೆಯ ಬಗ್ಗೆ ರುಬಯ್ಯ ಅವರಿಗೆ ತಿಳಿಸಲಾಗಿಲ್ಲ ಎಂದು ಹೇಳಿದರು. ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರುಬಯ್ಯ ಅವರಿಗೆ ತಿಳಿಸಿರುವುದಾಗಿ ಸಿಬಿಐ ಹೇಳಿಕೊಂಡಿದೆ. ಆದರೆ, ಸಿಬಿಐ ತಪ್ಪುದಾರಿಗೆಳೆದ ಕಾರಣ ಟಾಡಾ ನ್ಯಾಯಾಲಯ ವಾರಂಟ್‌ಗಳನ್ನು ಹಿಂಪಡೆದಿದೆ ಎಂದು ಹೇಳಿದರು.
ಆದರೆ, ಸಿಬಿಐನ ಹಿರಿಯ ವಕೀಲ ಮೋನಿಕಾ ಕೊಹ್ಲಿ ಈ ಹೇಳಿಕೆಯನ್ನು ವಿರೋಧಿಸಿದ್ದು, ನ್ಯಾಯಾಧೀಶರು ವಾರಂಟ್ ಅನ್ನು ಹಿಂತೆಗೆದುಕೊಂಡ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದರು. "ನಮಗೆ ಅಂತಹ ಯಾವುದೇ ಸೂಚನೆ ಇಲ್ಲ" ಎಂದು ತಿಳಿಸಿದರು.
ಈ ವರ್ಷದ ಮೇನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ಜೊತೆಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ.
ಯಸಿನ್ ಮಲಿಕ್‌ಗೆ ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಮೇ 19 ರಂದು ಅಪರಾಧಿ ಎಂದು ಘೋಷಿಸಲ್ಪಟ್ಟ ಯಾಸಿನ್‌ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ಸಂಸ್ಥೆ ಕೋರಿತ್ತು. ಈ ವೇಳೆ ಮಲಿಕ್ ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ವಿರೋಧಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications