ಪುಲ್ವಾಮಾ ಸಂಚುಕೋರ ಅಬ್ದುಲ್ ರಶೀದ್ ಘಾಜಿ ಹತ್ಯೆ?!
Recommended Video

Pulwama : ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆ ಮಾಡಿದ ಭಾರತ ಸೇನೆ | Oneindia Kannada
ಶ್ರೀನಗರ, ಫೆಬ್ರವರಿ 18: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ದಾಳಿಯ ಸಂಚುಕೋರ ಅಬ್ದುಲ್ ರಶೀದ್ ಘಾಜಿಯನ್ನು ಹತ್ಯೆ ಮಾಡುವ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.
ಆದರೆ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಇನ್ನೊಂದೆಡೆ ಜೈಶ್ ಈ ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರ ಮೇಲೆ ಎನ್ ಕೌಂಟರ್ ದಾಳಿ ನಡೆಸಿದ ಭಾರತೀಯ ಸೇನೆಯ ನಾಲ್ವರು ಯೋಧರು ಹುತಾತ್ಮರಾಗಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿಯೂ ಹತ್ಯೆಗೊಳಗಾಗಿದ್ದಾರೆ.

ಉಗ್ರ ದಮನಕ್ಕಾಗಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದು, ಸೇನೆ ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧವಾಗಿದೆ. ಈಗಾಗಲೇ ನಾಲ್ಕೈದು ಭಯೋತ್ಪಾದಕರನ್ನು ಬಲೆಗೆ ಬೀಳಿಸಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಈ ಕುರಿತು ಖಚಿತ ಮಾಹಿತಿ ಲಭ್ಯವಾಗಬೇಕಿದೆ.












Click it and Unblock the Notifications