• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಕ್ಯಾಪ್ಟನ್ ಹುತಾತ್ಮ

|
Google Oneindia Kannada News

ಶ್ರೀನಗರ, ಜುಲೈ 18: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಆಕಸ್ಮಿಕ ಗ್ರೆನೇಡ್ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಭಾರತೀಯ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ (ಜೆಸಿಒ) ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಾಗ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಅವರು ಇತರ ಸೈನಿಕರೊಂದಿಗೆ ಕರ್ತವ್ಯದಲ್ಲಿದ್ದರು. ಮೆಂಧರ್ ಸೆಕ್ಟರ್‌ನಲ್ಲಿ ಎಲ್ಒಸಿ ಉದ್ದಕ್ಕೂ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು. ಆಗ ಆಕಸ್ಮಿಕ ಗ್ರೆನೇಡ್ ಸ್ಫೋಟ ಉಂಟಾಗಿದೆ.

ಅವರನ್ನು ತಕ್ಷಣ ಹೆಲಿಕಾಪ್ಟರ್‌ನಲ್ಲಿ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಕರೆದೊಯ್ಯಲಾಯಿತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಮತ್ತು ನಾಯಬ್ ಸುಬೇದಾರ್ ಭಗವಾನ್ ಸಿಂಗ್ ಎಂದು ಗುರುತಿಸಲಾಗಿದೆ.

ವಿಚಾರಣೆಗೆ ಆದೇಶ; ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಸೈನಿಕರನ್ನು ಗೌರವಿಸುವುದಾಗಿ ಸೇನೆ ಅಧಿಕೃತ ಹೇಳಿಕೆ ತಿಳಿಸಿದೆ. ಅಲ್ಲದೇ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದೆ.

English summary
Grenade blast in Jammu and Kashmir’s Poonch, army captain and JCO killed
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X