ಅಮರನಾಥ ಮೇಘಸ್ಫೋಟ: ಪರಿಸ್ಥಿತಿ ಅವಲೋಕಿಸಿದ ಮೋದಿ ಮತ್ತು ಅಮಿತ್ ಶಾ
ಶ್ರೀನಗರ ಜುಲೈ 8: ಜಮ್ಮು ಮತ್ತು ಕಾಶ್ಮೀರದ ಅಮರನಾಥ ಗುಹೆಯ ಬಳಿ ಶುಕ್ರವಾರ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ಸಂಜೆ 5.30 ರ ಸುಮಾರಿಗೆ ಅಮರನಾಥ ದೇವಸ್ಥಾನದ ಬಳಿ ಮೇಘಸ್ಫೋಟವು ಗುಹೆ ಪ್ರದೇಶದಲ್ಲಿ ಸಂಭವಿಸಿದೆ. ಘಟನೆಯ ಬಳಿಕ ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಗತ್ಯ ಕ್ರಮಕ್ಕೆ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಘಟನೆಯ ಬಗ್ಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅಮರನಾಥ ಗುಹೆಯ ಬಳಿ ಮೋಡ ಕವಿದ ಪರಿಣಾಮ ಮೇಘಸ್ಫೋಟ ಸಂಭವಿಸಿದೆ. ಇದರಿಂದ ಹಲವು ಜನ ಸಾವನ್ನಪ್ಪಿರುವುದು ದುಃಖವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಪೀಡಿತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದಿದ್ದಾರೆ.
Anguished by the cloud burst near Shree Amarnath cave. Condolences to the bereaved families. Spoke to @manojsinha_ Ji and took stock of the situation. Rescue and relief operations are underway. All possible assistance is being provided to the affected.
— Narendra Modi (@narendramodi) July 8, 2022
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೆ-ಕೆ ಎಲ್‌ಜಿ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು, ವಿವಿಧ ಏಜೆನ್ಸಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಅಮರನಾಥ ಗುಹೆಯ ಬಳಿ ಮೇಘಸ್ಫೋಟ ಸಂಭವಿಸಿದ ನಂತರ ಪ್ರವಾಹಕ್ಕೆ ಕಾರಣವಾಗಿದೆ. ಈ ಬಗ್ಗೆ ಎಲ್‌ಜಿ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ ಅಮಿತ್ ಶಾ, ಎನ್‌ಡಿಆರ್‌ಎಫ್, ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಸ್ಥಳೀಯ ಆಡಳಿತ ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಎಲ್ಲಾ ಭಕ್ತರ ಸುರಕ್ಷತೆ ಜನರ ಜೀವ ಉಳಿಸುವುದು ನಮ್ಮ ಆದ್ಯತೆಯಾಗಿದೆ ಎಂದಿದ್ದಾರೆ.
बाबा अमरनाथ जी की गुफा के पास बादल फटने से आयी फ्लैश फ्लड के संबंध में मैंने LG श्री @manojsinha_ जी से बात कर स्थिति की जानकारी ली है। NDRF, CRPF, BSF और स्थानीय प्रशासन बचाव कार्य में लगे हैं। लोगों की जान बचाना हमारी प्राथमिकता है। सभी श्रद्धालुओं की कुशलता की कामना करता हूँ।
— Amit Shah (@AmitShah) July 8, 2022
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ತಂಡಗಳು ಮತ್ತು ಇತರ ಏಜೆನ್ಸಿಗಳ ರಕ್ಷಣಾ ಕಾರ್ಯಾಚರಣೆಗಳು ಪ್ರಸ್ತುತ ನಡೆಯುತ್ತಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಪ್ರದೇಶ ಜಲಾವೃತವಾಗಿರುವ ಕಾರಣ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳು:
NDRF: 011-23438252, 011-23438253
Kashmir Divisional Helpline: 0194-2496240
Shrine Board Helpline: 0194-2313149
Joint Police Control Room Pahalgam
9596779039
9797796217
01936243233
01936243018
Police control room Anantnag
01932225870
01932222870
Shri Amarnath Shrine Board
NDRF: 011-23438252, 011-23438253
Kashmir Divisional Helpline: 0194-2496240












Click it and Unblock the Notifications