ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮರನಾಥ ಯಾತ್ರಿಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ

|
Google Oneindia Kannada News

ಶ್ರೀನಗರ, ಏಪ್ರಿಲ್ 23 : ಈ ವರ್ಷದ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ. ಕೊರೊನಾ ಭೀತಿ ಹಿನ್ನಲೆಯಲ್ಲಿ ಯಾತ್ರೆ ರದ್ದುಗೊಳಿಸಲಾಗಿದೆ ಎಂಬ ಆದೇಶ ಪ್ರಕಟವಾಗಿತ್ತು.

ಹೊಸ ಪತ್ರಿಕಾ ಪ್ರಕಟಣೆ ಪ್ರಕಾರ ಜೂನ್ 23 ರಿಂದ ಆಗಸ್ಟ್ 3ರ ತನಕ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಇದೇ ಮೊದಲ ಬಾರಿಗೆ ಇಂತಹ ಆದೇಶ ಹೊರಡಿಸಲಾಗಿದೆ ಎಂದು ಭಕ್ತರು ಹೇಳಿದ್ದಾರೆ.

ಗಡಿ ಉದ್ವಿಗ್ನ: ಅಮರನಾಥ ಯಾತ್ರಿಗಳ ಏರ್‌ಲಿಫ್ಟ್‌ಗಡಿ ಉದ್ವಿಗ್ನ: ಅಮರನಾಥ ಯಾತ್ರಿಗಳ ಏರ್‌ಲಿಫ್ಟ್‌

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗಿದ್ದರೂ ಅಮರನಾಥ ಯಾತ್ರೆಯನ್ನು ರದ್ದು ಮಾಡಿರಲಿಲ್ಲ ಎಂದು ಭಕ್ತರು ಹೇಳುತ್ತಿದ್ದಾರೆ. ಲೆಫ್ಟಿನೆಂಟ್ ಗೌರ್ನರ್ ಜಿ. ಸಿ. ಮುರ್ಮು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯಾತ್ರೆ ಸ್ಥಗಿತಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ.

ಅಮರನಾಥ ಯಾತ್ರಿಕರಿಗೆ ಪ್ರೀಪೇಯ್ಡ್ ಪ್ಲಾನ್ ಪರಿಚಯಿಸಿದ ಜಿಯೋ ಅಮರನಾಥ ಯಾತ್ರಿಕರಿಗೆ ಪ್ರೀಪೇಯ್ಡ್ ಪ್ಲಾನ್ ಪರಿಚಯಿಸಿದ ಜಿಯೋ

Amarnath Yatra From June 23 To August 3 Cancelled

ಅಮರನಾಥ ಯಾತ್ರೆ ರದ್ದುಗೊಂಡರೂ ಪ್ರಥಮ ಪೂಜೆ ಮತ್ತು ಸಂಪನ್ನ ಪೂಜೆಯನ್ನು ಸಂಪ್ರದಾಯದ ಪ್ರಕಾರವಾಗಿಯೇ ನಡೆಸಲಾಗುತ್ತದೆ ಎಂದು ಅಮರನಾಥ ಯಾತ್ರೆಯ ಮಂಡಳಿ ಸ್ಪಷ್ಟಪಡಿಸಿದೆ.

ಅಮರನಾಥ ಯಾತ್ರಿಕರಿಗೆ ಈ ಬಾರಿ ಕಂಡು ಕೇಳರಿಯದ ಬಿಗಿ ಭದ್ರತೆಅಮರನಾಥ ಯಾತ್ರಿಕರಿಗೆ ಈ ಬಾರಿ ಕಂಡು ಕೇಳರಿಯದ ಬಿಗಿ ಭದ್ರತೆ

ಈ ವರ್ಷದ ಅಮರನಾಥ ಯಾತ್ರೆ ಜೂನ್ 23ರಂದು ಆರಂಭವಾಗಬೇಕಿತ್ತು. 42 ದಿನಗಳ ಯಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದರು. ಆದರೆ, ಈ ಬಾರಿ ಕೊರೊನಾ ಪರಿಣಾಮದಿಂದಾಗಿ ಮೊದಲ ಹಂತದ ಯಾತ್ರೆ ರದ್ದುಗೊಳ್ಳಲಿದೆ.

ಜಮ್ಮು ಮತ್ತು ಕಾಶ್ಮೀರದ ಒಂದು ಗುಹೆಯಲ್ಲಿ ಅಮರನಾಥ ದೇವಾಲಯವಿದೆ. ಗುಹೆಯೊಳಗೆ ಮಂಜಿನ ಗೆಡ್ಡೆ ಲಿಂಗದ ಆಕಾರವನ್ನು ಹೊಂದಲಿದ್ದು, ಇದನ್ನು ಶಿವನ ಪ್ರತಿರೂಪ ಎಂದು ಪೂಜಿಸಲಾಗುತ್ತದೆ. ಇದರ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಪ್ರತಿವರ್ಷ ದೇಶದ ವಿವಿಧ ರಾಜ್ಯಗಳಿಂದ ಆಗಮಿಸುತ್ತಾರೆ.

English summary
In a new order Jammu and Kashmir government has said Amarnath Yatra scheduled from June 23 to August 3 was cancelled due to the coronavirus outbreak.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X