ಉದ್ವಿಗ್ನ ಸ್ಥಿತಿ ನಡುವೆ ಕಣಿವೆ ರಾಜ್ಯಕ್ಕೆ ಅಮಿತ್ ಶಾ ಭೇಟಿ
ನವದೆಹಲಿ, ಆಗಸ್ಟ್ 04: ಕಣಿವೆ ರಾಜ್ಯಕ್ಕೆ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾಗ ಯಾವುದೇ ಕಹಿ ಘಟನೆ ಸಂಭವಿಸಿರಲಿಲ್ಲ. ಈ ಮೂಲಕ ಹಲವು ದಶಕಗಳ ನಂತರ ಶಾಂತಿ ವಾತಾವರಣ ಉಂಟಾಗಿದ್ದು ನೆನಪಿರಬಹುದು. ಆದರೆ, ಈಗ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರೂ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಲು ಸಜ್ಜಾಗಿದ್ದಾರೆ.
"ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಬಳಿಕ ಕಣಿವೆ ರಾಜ್ಯಕ್ಕೆ ಇದೇ ವಾರದಲ್ಲಿ ಭೇಟಿ ನೀಡಲಿದ್ದಾರೆ' ಎಂದು ಗೃಹ ಸಚಿವಾಲಯದ ಮೂಲಗಳಿಂದ ಒನ್ಇಂಡಿಯಾಕ್ಕೆ ತಿಳಿದು ಬಂದಿದೆ,
A meeting is underway between Union Home Minister Amit Shah, Home Secretary Rajiv Gauba and National Security Advisor Ajit Doval, at the Parliament. pic.twitter.com/v5Sw5AmwfQ
— ANI (@ANI) August 4, 2019
ಸೋಮವಾರವೇ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿತ್ತು. ಆದರೆ, ಇಂದು ಉನ್ನತ ಮಟ್ಟದ ಸಭೆ ಬಳಿಕ ದಿನಾಂಕ ನಿಗದಿಯಾಗಲಿದೆ. ಕೇಂದ್ರ ಗೃಹ ಸಚಿವ ಅಮಿತ್ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಜೊತೆ ಅವರನ್ನು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ನಾಳೆ ಕೇಂದ್ರ ಸಚಿವ ಸಂಪುಟ ಸಭೆಯಿದೆ. ನಂತರ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆಗೆ ನಡೆಯುವ ಸಭೆಯಲ್ಲಿ ಅಮಿತ್ ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಶೇ10ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಮಂಡನೆ ಮಾಡಲು ಅಮಿತ್ ಶಾ ಮುಂದಾಗಿದ್ದಾರೆ.

ಕಾಶ್ಮೀರ ಗಡಿಯಲ್ಲಿ ಸಾವಿರಾರು ಸೈನಿಕರು ಜಮೆಯಾಗಿದ್ದಾರೆ, ಅಮರನಾಥ ಯಾತ್ರಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗುತ್ತಿದೆ. ಕಣಿವೆ ರಾಜ್ಯದಲ್ಲಿ ಅಗತ್ಯ ವಸ್ತುಗಳನ್ನು ಸ್ಥಳೀಯರು ಜೋಪಾನವಾಗಿ ಎತ್ತಿಟ್ಟುಕೊಳ್ಳುತ್ತಿದ್ದಾರೆ. ಜುಲೈ 31ರಿಂದ ಆಗಸ್ಟ್ 01ರ ತನಕ ಪಾಕಿಸ್ತಾನ ಗಡಿ ಕ್ಷಿಪ್ರ ಪಡೆ ನೆರವಿನಿಂದ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications