ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದ್ವಿಗ್ನ ಸ್ಥಿತಿ ನಡುವೆ ಕಣಿವೆ ರಾಜ್ಯಕ್ಕೆ ಅಮಿತ್ ಶಾ ಭೇಟಿ

|
Google Oneindia Kannada News

ನವದೆಹಲಿ, ಆಗಸ್ಟ್ 04: ಕಣಿವೆ ರಾಜ್ಯಕ್ಕೆ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾಗ ಯಾವುದೇ ಕಹಿ ಘಟನೆ ಸಂಭವಿಸಿರಲಿಲ್ಲ. ಈ ಮೂಲಕ ಹಲವು ದಶಕಗಳ ನಂತರ ಶಾಂತಿ ವಾತಾವರಣ ಉಂಟಾಗಿದ್ದು ನೆನಪಿರಬಹುದು. ಆದರೆ, ಈಗ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರೂ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಲು ಸಜ್ಜಾಗಿದ್ದಾರೆ.

"ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಬಳಿಕ ಕಣಿವೆ ರಾಜ್ಯಕ್ಕೆ ಇದೇ ವಾರದಲ್ಲಿ ಭೇಟಿ ನೀಡಲಿದ್ದಾರೆ' ಎಂದು ಗೃಹ ಸಚಿವಾಲಯದ ಮೂಲಗಳಿಂದ ಒನ್ಇಂಡಿಯಾಕ್ಕೆ ತಿಳಿದು ಬಂದಿದೆ,

ಸೋಮವಾರವೇ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿತ್ತು. ಆದರೆ, ಇಂದು ಉನ್ನತ ಮಟ್ಟದ ಸಭೆ ಬಳಿಕ ದಿನಾಂಕ ನಿಗದಿಯಾಗಲಿದೆ. ಕೇಂದ್ರ ಗೃಹ ಸಚಿವ ಅಮಿತ್​ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್, ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಜೊತೆ ಅವರನ್ನು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ನಾಳೆ ಕೇಂದ್ರ ಸಚಿವ ಸಂಪುಟ ಸಭೆಯಿದೆ. ನಂತರ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆಗೆ ನಡೆಯುವ ಸಭೆಯಲ್ಲಿ ಅಮಿತ್ ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಶೇ10ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಮಂಡನೆ ಮಾಡಲು ಅಮಿತ್ ಶಾ ಮುಂದಾಗಿದ್ದಾರೆ.

Amidst turmoil, Amit Shah to make much anticipated visit to J&K

ಕಾಶ್ಮೀರ ಗಡಿಯಲ್ಲಿ ಸಾವಿರಾರು ಸೈನಿಕರು ಜಮೆಯಾಗಿದ್ದಾರೆ, ಅಮರನಾಥ ಯಾತ್ರಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗುತ್ತಿದೆ. ಕಣಿವೆ ರಾಜ್ಯದಲ್ಲಿ ಅಗತ್ಯ ವಸ್ತುಗಳನ್ನು ಸ್ಥಳೀಯರು ಜೋಪಾನವಾಗಿ ಎತ್ತಿಟ್ಟುಕೊಳ್ಳುತ್ತಿದ್ದಾರೆ. ಜುಲೈ 31ರಿಂದ ಆಗಸ್ಟ್ 01ರ ತನಕ ಪಾಕಿಸ್ತಾನ ಗಡಿ ಕ್ಷಿಪ್ರ ಪಡೆ ನೆರವಿನಿಂದ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ.

English summary
Union Home Minister, Amit Shah will make a much anticipated visit to Jammu and Kashmir amidst all the uncertainty that is prevailing in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X