ಕಣಿವೆ ರಾಜ್ಯದಲ್ಲಿ ಮತ್ತೋರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರ
ಶ್ರೀನಗರ, ಮೇ 15: ಮೂರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಜಮ್ಮು ಕಾಶ್ಮೀರದಲ್ಲಿ ಮತ್ತೋರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆದು ಹೋಗಿದೆ.
ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ 20 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಅತ್ಯಾಚಾರ ವಿರುದ್ಧ ಪ್ರತಿಭಟನೆಗಳು ಕೂಡ ನಡೆದಿದ್ದವು.
ಅಪ್ರಾಪ್ತ ಬಾಲಕಿ ಪೋಷಕರು ಗಂದೇರ್‌ಬಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೊಹಮ್ಮದ್ ಆಸಿಫ್ ವಾನಿ ಮೇಲೆ ದೂರು ದಾಖಲಾಗಿದೆ.

ಬಾಲಕಿಯ ವೈದ್ಯಕೀಯ ಪರೀಕ್ಷೆ ಪರೀಕ್ಷೆಗೆ ಒಳಪಡಿಸಲಾಗಿದೆ. ಐಪಿಸಿ ಸೆಕ್ಷನ್ 451,376 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೋಕ್ಸೊ ಕಾಯ್ದೆಯಡಿಯೂ ಪ್ರಕರಣವನ್ನು ದಾಖಲಿಸಲಾಗಿದೆ.
ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದು ಒಂದು ವಾರ ಕಳೆದಿಲ್ಲ ಈಗಲೇ ಎರಡನೇ ಪ್ರಕರಣ ದಾಖಲಾಗಿದೆ. ಪ್ರತಿಭಟನೆ ಕಾವು ತೀವ್ರವಾಗಿದ್ದ ಕಾರಣ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಗುವಿಗೆ ಸಿಹಿ ತಿಂಡಿಯನ್ನು ನೀಡಿ ಕರೆದೊಯ್ದು ಪಾಪಿ ಅತ್ಯಾಚಾರ ನಡೆಸಿದ್ದ.
ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಕೂಡ ಘಟನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.












Click it and Unblock the Notifications