ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಹೊಸ ಅಲೆ ಸೃಷ್ಟಿಸುತ್ತಾ ಈ ಹೊಸ ಪಕ್ಷ?

|
Google Oneindia Kannada News

ಶ್ರೀನಗರ್, ಮಾರ್ಚ್.08: ಜಮ್ಮು-ಕಾಶ್ಮೀರ ರಾಜಕೀಯ ರಂಗದಲ್ಲಿ ಹೊಸ ಪಕ್ಷ ಉದಯಿಸಿದೆ. ಬಿಜೆಪಿ-ಕಾಂಗ್ರೆಸ್-ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫೆರೆನ್ಸ್ ಜೊತೆಗೆ 'ಆಪ್ನಿ ಪಾರ್ಟಿ' ಎಂಬ ಪಕ್ಷವನ್ನು ಭಾನುವಾರ ಮಾಜಿ ಸಚಿವ ಅಲ್ತಾಫ್ ಬುಖಾರಿ ಸ್ಥಾಪಿಸಿದ್ದಾರೆ.

ಕಳೆದ 2019ರ ಆಗಸ್ಟ್ ನಲ್ಲಿ ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ತೆರವುಗೊಳಿಸಿದ ನಂತರ ಸ್ಥಾಪನೆಯಾದ ಮೊದಲ ಪಕ್ಷವಾಗಿದೆ. ಪಿಡಿಪಿ, ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ನ 31 ಮುಖಂಡರು ಆಪ್ನಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

ಜಮ್ಮು ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣ ನಿರ್ಬಂಧ ತೆರವುಜಮ್ಮು ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣ ನಿರ್ಬಂಧ ತೆರವು

ಹೊಸ ಜವಾಬ್ದಾರಿಗಳೊಂದಿಗೆ ನೂತನ ಪಕ್ಷವನ್ನು ಸ್ಥಾಪನೆ ಮಾಡಲಾಗಿದ್ದು, ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಪಕ್ಷವು ಕಾರ್ಯ ನಿರ್ವಹಿಸಲಿದೆ ಎಂದು ಆಪ್ನಿ ಪಾರ್ಟಿ ಮುಖ್ಯಸ್ಥ ಅಲ್ತಾಫ್ ಬುಖಾರಿ ತಿಳಿಸಿದರು.

Apni Party Launched In Jammu-Kashmir, 31 Leaders Joined To Party

ಸವಾಲುಗಳನ್ನು ಎದುರಿಸಲು ಸಿದ್ಧ ಎಂದ ಬುಖಾರಿ:

ಜಮ್ಮು-ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆದ ಬಳಿಕ ಸಾಕಷ್ಟು ಬದಲಾವಣೆಗಳಾಗಿವೆ. ರಾಜ್ಯದಲ್ಲಿನ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಕಾರ್ಖಾನೆಗಳು ಬಂದ್ ಆಗುವ ಸ್ಥಿತಿಗೆ ಬಂದು ತಲುಪಿವೆ. ಈ ಎಲ್ಲ ಸಮಸ್ಯೆಗಳನ್ನು ಎದುರಿಸಲು ಪ್ರಾಮಾಣಿಕ ಪ್ರಯತ್ನವನ್ನು ಆಪ್ನಿ ಪಕ್ಷವು ಮಾಡಲಿದೆ.

ಜನರಿಗೆ ಕನಸುಗಳನ್ನು ಮಾರಾಟ ಮಾಡುವುದಕ್ಕೆ ನಾವು ಬಂದಿಲ್ಲ. ಆದರೆ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡುವ ಉದ್ದೇಶವನ್ನು ಇಟ್ಟುಕೊಂಡು ಆಪ್ನಿ ಪಕ್ಷವನ್ನು ಸ್ಥಾಪಿಸಲಾಗಿದೆ ಎಂದು ಅಲ್ತಾಫ್ ಬುಖಾರಿ ತಿಳಿಸಿದ್ದಾರೆ.

English summary
AltaF Bukhari Launched Apni Party In Jammu-Kashmir, 31 Leaders Joined To Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X