Breaking: ಕಾಶ್ಮೀರದಲ್ಲಿ ಗುಂಡಿಕ್ಕಿ ಬ್ಯಾಂಕ್ ಮ್ಯಾನೇಜರ್‌ ಹತ್ಯೆ

ಶ್ರೀನಗರ, ಜೂ. 2: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಮತ್ತೊಂದು ಘಟನೆಯಲ್ಲಿ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಜೂನ್ 2 ಗುರುವಾರದಂದು ಕುಲ್ಗಾಮ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರೆ ಮೋಹನ್ ಪೋರಾದಲ್ಲಿರುವ ಎಲ್ಲಕ್ಷೈ ದೇಹತಿ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ವಿಜಯ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ರಾಜಸ್ಥಾನದ ಹನುಮಾನ್‌ಗಢ ಮೂಲದ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅದರೆ ಅವರು ಸಾವನ್ನಪ್ಪಿದರು. ಶೋಪಿಯಾನ್‌ನಿಂದ ಕೇವಲ 13 ಕಿಮೀ ದೂರದಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಾರ ಬೆಳಗ್ಗೆ ಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.

Bank manager shot dead in Kashmir

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶದಲ್ಲಿ ಹಿಂದೂ ಮಹಿಳೆಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ರಜನಿ ಬಾಲಾ ಎಂಬ ಶಾಲಾ ಶಿಕ್ಷಕಿಯನ್ನು ಕೊಲ್ಲಲಾಗಿತ್ತು. ಅವರು ತಮ್ಮ ಪತಿ ಮತ್ತು ಮಗಳೊಂದಿಗೆ ಜಮ್ಮು ವಿಭಾಗದ ಸಾಂಬಾದಲ್ಲಿ ವಾಸಿಸುತ್ತಿದ್ದರು. ವಿಜಯ್‌ ಕುಮಾರ್ ಹತ್ಯೆಯು ಕಾಶ್ಮೀರದಲ್ಲಿ ನಡೆದ ಉದ್ದೇಶಿತ ಹತ್ಯೆಗಳ ಸರಣಿಯಲ್ಲಿ ಇತ್ತೀಚಿನದು. ಕಳೆದ ವಾರ, ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಟಿವಿ ನಿರೂಪಕಿ ಅಮ್ರೀನ್ ಭಟ್ ಸಾವನ್ನಪ್ಪಿದ್ದರು. ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು.

(ಒನ್ಇಂಡಿಯಾ ಸುದ್ದಿ)

Recommended Video

      ಲಾರೆನ್ಸ್ ಬಿಶ್ನೋಯ್ ಗೆ ಹೆದರಿ ಪೊಲೀಸ್ ಮೊರೆ ಹೋದ ಸಲ್ಮಾನ್ ಖಾನ್ | OneIndia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+