ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಬಾರಾಮುಲ್ಲ, ಆಗಸ್ಟ್ 22: ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ಇಂದು ತೀವ್ರ ಶೋಧ ಕಾರ್ಯಾಚರಣೆ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಿವೆ ಎಂದು ಪೊಲೀಸ್ ವಕ್ತಾರರು ಶನಿವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್ , ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಪಡೆಗಳು ಇಂದು ಬಾರಾಮುಲ್ಲಾ ಜಿಲ್ಲೆಯ ಕ್ರೆರಿಯ ಚೆಕ್-ಇ-ಸಲೂಸಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಅರಂಭಿಸಿದ್ದವು.

ಭದ್ರತಾ ಪಡೆಗಳು ಹಳ್ಳಿಯ ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿದ್ದ ಉಗ್ರರು ಯೋಧರತ್ತ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಅವರು ಹೇಳಿದ್ದಾರೆ. ಎನ್‌ಕೌಂಟರ್‌ನಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊಬ್ಬರಿಗೆ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.












Click it and Unblock the Notifications