• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಂಬೇಡ್ಕರ್ ಇದ್ದಿದ್ದರೆ ಅವರನ್ನೂ ಪಾಕ್‌ ಪರ ಎನ್ನುತ್ತಿತ್ತು ಬಿಜೆಪಿ: ಮುಫ್ತಿ

|
Google Oneindia Kannada News

ಶ್ರೀನಗರ, ಜೂನ್ 14: 'ಒಂದೊಮ್ಮೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಈಗ ಇದ್ದಿದ್ದರೆ ಅವರನ್ನೂ ಕೂಡ ಬಿಜೆಪಿಯು ಪಾಕಿಸ್ತಾನದ ಪರ ಎಂದು ಹೇಳುತ್ತಿತ್ತು' ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಇದ್ದಿದ್ದರೆ ಅವರನ್ನೂ ಬಿಜೆಪಿ ಪಾಕ್ ಪರ ಎಂದು ಅಪಪ್ರಚಾರ ಮಾಡುತ್ತಿತ್ತು ಎಂದು ಪಿಡಿಪಿ ಮುಖ್ಯಸ್ಥೆ ಮೊಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಸಂವಿಧಾನದ 370ನೇ ವಿಧಿ ಮೂಲಕ ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಲಾಗಿತ್ತು. ಆದರೆ ಈ ವಿಶೇಷ ಅಧಿಕಾರವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಶಗೊಳಿಸಿದೆ. ಅಲ್ಲದೆ ಅಂಬೇಡ್ಕರ್ ಈಗ ಜೀವಂತವಾಗಿಲ್ಲ, ಇದ್ದಿದ್ದರೆ ಅವರನ್ನು ಪಾಕಿಸ್ತಾನ ಎಂದು ಬಿಜೆಪಿಗರು ದೂಷಿಸುತ್ತಿದ್ದರು ಎಂದು ಮುಫ್ತಿ ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ರದ್ದು ಮಾಡಿರುವ ಬಗ್ಗೆ ಮರುಚಿಂತನೆ ನಡೆಸಬಹುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದು ಇದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಜಮ್ಮು ಮತ್ತು ಕಾಶ್ಮೀರದ ಗೌರವ ಮರಳಿ ಕೊಡಿಸಿ ಎಂದು ಪಾಕಿಸ್ತಾನವನ್ನು ಕೇಳಲೇ?: ಮೆಹಬೂಬಾಜಮ್ಮು ಮತ್ತು ಕಾಶ್ಮೀರದ ಗೌರವ ಮರಳಿ ಕೊಡಿಸಿ ಎಂದು ಪಾಕಿಸ್ತಾನವನ್ನು ಕೇಳಲೇ?: ಮೆಹಬೂಬಾ

2019ರಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.
''ದೇವರಿಗೆ ಧನ್ಯವಾದಗಳು, ಈಗ ಅಂಬೇಡ್ಕರ್ ಅವರು ಇಲ್ಲ, ಒಂದೊಮ್ಮೆ ಅವರು ಇದ್ದಿದ್ದರೆ ಅವರನ್ನೂ ಪಾಕಿಸ್ತಾನದ ಪರ ಎಂದು ಬಿಜೆಪಿ ಬಿಂಬಿಸುತ್ತಿತ್ತು' ಎಂದು ಮುಫ್ತಿ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಜತೆಗೂ ಮೈತ್ರಿ ಮಾಡಿಕೊಂಡಿದ್ದ ಮೆಹಬೂಬಾ ಮುಫ್ತಿ, ಈಗ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಕ್ಲಬ್ ಹೌಸ್ ಆಡಿಯೋ ಸಂವಾದದಲ್ಲಿ ಪಾಕಿಸ್ತಾನದ ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರವಾಗಿ ದಿಗ್ವಿಜಯ್ ಸಿಂಗ್ ಜಮ್ಮು ಕಾಶ್ಮೀರದಲ್ಲಿಸಂವಿಧಾನದ ವಿಧಿ 370ನ್ನು ತೆಗೆದು ಹಾಕಿರುವ ನಿರ್ಧಾರ ಅತ್ಯಂತ ದುಃಖಕರವಾದದ್ದು, ಕಾಂಗ್ರೆಸ್ ಪಕ್ಷವು ಖಂಡಿತವಾಗಿಯೂ ಈ ವಿಷಯದ ಬಗ್ಗೆ ಮರು ಚಿಂತನೆ ಮಾಡುತ್ತಿದೆ ಎಂದು ಹೇಳಿದ್ದರು.

English summary
The BJP would have slandered even BR Ambedkar, the father of Indian Constitution, as pro-Pakistan had he been alive, PDP president Mehbooba Mufti said Sunday, amidst criticism of Congress leader Digvijaya Singh over his remarks on Article 370.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X