• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೆಡ್ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ

|

ಶ್ರೀನಗರ, ಮಾರ್ಚ್ 07: ಜಮ್ಮುವಿನ ಬಸ್ ವೊಂದರ ಮೇಲೆ ಗ್ರೆನೇಡ್ ಸ್ಫೋಟ ನಡೆದಿದ್ದು, 28 ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರಲ್ಲಿ ಓರ್ವ ವ್ಯಕ್ತಿ ಚಿಕಿತ್ಸೆ ಪಳಕಾರಯಾಗದೆ ಮೃತರಾಗಿದ್ದಾರೆ ಎನ್ನಲಾಗಿದೆ.

ಲಕ್ನೋದಲ್ಲಿ ಕಾಶ್ಮೀರಿಗಳ ಮೇಲೆ ಹೀನಾಯ ಹಲ್ಲೆ, ವಿಡಿಯೋ ವೈರಲ್

Blast at Jammu bus stand, many passengers injured

ಜಮ್ಮು ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ವೊಳಗೇ ಸ್ಫೋಟ ಸಂಭವಿಸಿದ್ದು, ಸ್ಫೋಟ ಸಂಭವಿಸುವಾಗ ಪ್ರಯಾಣಿಕರು ಬಸ್ಸಿನೊಳಗೇ ಇದ್ದರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇದು ಬಹುಶಃ ಟೈಯರ್ ಸ್ಫೋಟವಾಗಿದ್ದಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಬಾಲಕೋಟ್ ದಾಳಿ ಸುಳ್ಳಾ? ಉಪಗ್ರಹ ಚಿತ್ರಗಳು ಹೇಳುವ ಹೊಸಕತೆ ನಿಜಾನಾ?

"ಇದು ಗ್ರೆನೇಡ್ ಸ್ಫೋಟವಾಗಿದ್ದು, ಸುಮಾರು 28 ಜನ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡುತ್ತಿದ್ದೇವೆ" ಎಂದು ಜಮ್ಮು ಐಜಿಪಿ ಎಂಕೆ ಸಿನ್ಹಾ ಹೇಳಿದ್ದಾರೆ.

ಸೇನೆ ಎನ್‌ಕೌಂಟರ್‌ಗೆ ಹಂದ್ವಾರದಲ್ಲಿ ಓರ್ವ ಉಗ್ರ ಬಲಿ, ಮುಂದುವರೆದ ಶೋಧ

ಘಟನೆಯ ನಂತರ ಸ್ಫೋಟ ಸಂಭವಿಸಿದ ಸ್ಥಳದಿಂದ ಓರ್ವ ಉಗ್ರ ಪರಾರಿಯಾಗಿದ್ದಾನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ಮಾಡಿವೆ.ಘಟನೆಯಲ್ಲಿ ಗಾಯಗೊಂಡವರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಓರ್ವ ಶಂಕಿತ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

English summary
Jammu and Kashmir: Blast at Jammu bus stand. Many injured. Injured admitted to hospital.More details awaited
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X