ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮೋದಿ ಭೇಟಿಗೂ ಮುನ್ನವೇ ಜಮ್ಮುವಿನಲ್ಲಿ ಸ್ಫೋಟ

|
Google Oneindia Kannada News

ಶ್ರೀನಗರ, ಏಪ್ರಿಲ್ 24; ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೂ ಮುನ್ನವೇ ಜಮ್ಮುವಿನಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಮ್ಮುವಿಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಗೂ ಮೊದಲೇ ಸ್ಫೋಟ ಸಂಭವಿಸಿದೆ.

ಪ್ರಧಾನಿ ಮೋದಿ ಭೇಟಿಗೂ ಮುನ್ನವೇ ಜಮ್ಮುವಿನಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಕಾಳಗ ಪ್ರಧಾನಿ ಮೋದಿ ಭೇಟಿಗೂ ಮುನ್ನವೇ ಜಮ್ಮುವಿನಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಕಾಳಗ

ಜಮ್ಮುವಿನ ಬಿಶಾನ್ ಪ್ರದೇಶದ ಲಾಲೈನ್ ಎಂಬ ಗ್ರಾಮದಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಕೃಷಿ ಭೂಮಿಯಲ್ಲಿ ಈ ಸ್ಫೋಟ ನಡೆದಿದೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಜಮ್ಮು: 20,000 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಜಮ್ಮು: 20,000 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

Narendra Modi

ನರೇಂದ್ರ ಮೋದಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಬೆಳಗ್ಗೆ 11.30 ಆಗಮಿಸಲಿದ್ದಾರೆ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸುಮಾರು 20,000 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮಾಡಲಿದ್ದಾರೆ. ಸ್ಫೋಟದ ಹಿನ್ನಲೆಯಲ್ಲಿ ಮೋದಿ ಭೇಟಿ ನೀಡುವ ಪಲ್ಲಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

Breaking; ಬಾರಾಮುಲ್ಲ ಎನ್‌ಕೌಂಟರ್; 4 ಉಗ್ರರ ಹತ್ಯೆBreaking; ಬಾರಾಮುಲ್ಲ ಎನ್‌ಕೌಂಟರ್; 4 ಉಗ್ರರ ಹತ್ಯೆ

2019ರ ಬಳಿಕ ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅದರಲ್ಲೂ ಕಳೆದ ವಾರ ಉಗ್ರರ ದಾಳಿ ನಡೆದ ಹಿನ್ನಲೆಯಲ್ಲಿ ಪೊಲೀಸರು ಮತ್ತು ಸೇನಾ ಪಡೆ ಹೆಚ್ಚಿನ ನಿಗಾ ವಹಿಸಿದೆ.

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ನಡೆದಿದ್ದವು. ಗುರುವಾರ ಮತ್ತು ಶುಕ್ರವಾರ ಬಾರಮುಲ್ಲಾದ ಮಾಲ್ವ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿತ್ತು. ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಇದರಲ್ಲಿ ಎಲ್‌ಇಟಿ ಉಗ್ರ ಸಂಘಟನೆ ಕಮಾಂಡರ್ ಯೂಸೂಫ್ ಕಾಂಥ್ರೋ ಸಹ ಹತ್ಯೆಯಾಗಿದ್ದ.

English summary
Suspected blast in Jammu village ahead of PM Narendra Modi visit to Jammu and Kashmir on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X