ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಮೇಲೆ ಭಾರತೀಯ ಸೇನೆಯಿಂದ ಗುಂಡಿನ ದಾಳಿ

|
Google Oneindia Kannada News

ಶ್ರೀನಗರ, ಜುಲೈ 02: ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದವಾಗಿ ಕಾಣಿಸಿಕೊಂಡ ಡ್ರೋನ್ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ.

ಐಎಎಫ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ದಾಳಿ ಬೆನ್ನಲ್ಲೇ ಜಮ್ಮುವಿನಲ್ಲಿ ಪದೇ ಪದೇ ಡ್ರೋನ್ ಹಾರಾಟಗಳು ಪತ್ತೆಯಾಗುತ್ತಲೇ ಇವೆ. ಶುಕ್ರವಾರ ಕೂಡ ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ; ಡ್ರೋನ್ ಹಾರಾಟಗಳ ಮೇಲೆ ನಿರ್ಬಂಧಜಮ್ಮು ಮತ್ತು ಕಾಶ್ಮೀರ; ಡ್ರೋನ್ ಹಾರಾಟಗಳ ಮೇಲೆ ನಿರ್ಬಂಧ

ಅರ್ನಿಯಾ ಸೆಕ್ಟರ್ ನ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡ್ರೋನ್ ಹಾರಾಟ ಪತ್ತೆಯಾಗುತ್ತಿದ್ದಂತೆಯೇ ಭದ್ರತಾ ಪಡೆಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಗುಂಡಿನ ದಾಳಿ ನಡೆಸಿದ್ದಾರೆಂದು ಗಡಿ ಭದ್ರತಾ ಪಡೆಯ ವಕ್ತಾರರು ಮಾಹಿತಿ ನೀಡಿದ್ದಾರೆ.

Border Security Force Opens Fire After Drone Spotted On International Border In Jammu

ಡ್ರೋನ್ ದಾಳಿಯ ಆತಂಕದ ಹಿನ್ನೆಲೆಯಲ್ಲಿ ಮಿಲಿಟರಿ ನೆಲೆಗಳ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. ಜಮ್ಮು ಹೊರತುಪಡಿಸಿ, ಪಠಾಣ್‌ಕೋಟ್‌ನ ಪ್ರಮುಖ ಮಿಲಿಟರಿ ನೆಲೆಗಳ ಸುತ್ತ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ. ಐದು ವರ್ಷಗಳ ಹಿಂದೆ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಭಯೋತ್ಪಾದಕ ದಾಳಿ ನಡೆದಿತ್ತು.

ಜಮ್ಮುವಿನ ಅರ್ನಿಯಾ ಸೆಕ್ಟರ್ ಹೊರವಲಯದಲ್ಲಿ ಇಂದು ಬೆಳಗಿನ ಜಾವ 4.25ರ ಸುಮಾರಿಗೆ ಡ್ರೋನ್ ಹಾರಾಡಿರುವುದು ಪತ್ತೆಯಾಗಿದ್ದು, ಕೂಡಲೇ ಎಚ್ಚೆತ್ತ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆಂದು ಜಮ್ಮುವಿನ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿರುವ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

6ಕ್ಕೂ ಹೆಚ್ಚು ಸುತ್ತಿನಲ್ಲಿ ಭದ್ರತಾ ಪಡೆಗಳು ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಆಗಸದಲ್ಲಿ ಹಾರಾಡುತ್ತಿದ್ದ ಡ್ರೋಣ್ ಪಾಕಿಸ್ತಾನದ ಕಡೆಗೆ ಹಿಂತಿರುಗಿತ್ತು ಎಂದು ಹೇಳಿದ್ದಾರೆ.

English summary
The Border Security Force (BSF) on Friday opened fire on a suspected Pakistani surveillance drone after it tried to venture into the Indian territory on the International Border in Jammu, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X