ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹಿಂದೂ ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

|
Google Oneindia Kannada News

ಶ್ರೀನಗರ ಮೇ 31: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಹೆಚ್ಚಾಗಿದೆ. ಇಂದು ಮತ್ತೆ ಭಯೋತ್ಪಾದಕರ ದಾಳಿಗೆ ಹಿಂದೂ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಶಾಲಾ ಶಿಕ್ಷಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಅವರು ಪರಾರಿಯಾಗಿದ್ದಾರೆ.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಶಿಕ್ಷಕಿಯನ್ನು ಕೆಲವು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಆಕೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ದಾಳಿಯ ನಂತರ, ದಾಳಿಕೋರರನ್ನು ಹಿಡಿಯಲು ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಆದರೆ ಭಯೋತ್ಪಾದಕರು ಇನ್ನೂ ಗುರುತಿಸಲ್ಪಟ್ಟಿಲ್ಲ. ಆದರೆ ಅವರು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ.

Breaking: Terrorists shot dead Hindu teacher

ಮೃತ ಶಿಕ್ಷಕಿ ಸಾಂಬಾ (ಜಮ್ಮು ವಿಭಾಗ) ನಿವಾಸಿಯಾಗಿದ್ದಾರೆ. ಈ ಭೀಕರ ಭಯೋತ್ಪಾದಕ ಅಪರಾಧದಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಶೀಘ್ರದಲ್ಲೇ ಗುರುತಿಸಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಭರವಸೆ ನೀಡಿದ್ದಾರೆ.

(ಒನ್ಇಂಡಿಯಾ ಸುದ್ದಿ)

English summary
Terrorists opened fire in Jammu and Kashmir's Kulgam district, killing a Kashmiri Pandit teacher.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X