ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರ, ಫೆಬ್ರವರಿ 28: ಪಾಕಿಸ್ತಾನ ಸೇನೆಯು ಸತತ 20 ನೇ ಬಾರಿಗೆ ಕದನ ವಿರಾಮ ಉಲ್ಲಂಘಿಸಿದ್ದು ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ನಡೆಸಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಬೆಳಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.

ಒಟ್ಟು ಮೂರು ದಿನಗಳಲ್ಲಿ ಪಾಕ್ 20 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪುಲ್ವಾಮಾ ದಾಳಿ ಮತ್ತು ನಂತರ ಉಗ್ರ ನೆಲೆ ಧ್ವಂಸ ಈ ಎರಡು ಘಟನೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಏರ್ಪಾಡಾಗಿದೆ. ಇದೀಗ ಭಾರತೀಯ ಪೈಲಟ್‌ ಕೂಡ ಪಾಕ್ ವಶದಲ್ಲಿದ್ದಾರೆ ಅವರನ್ನು ರಕ್ಷಿಸುವಂತೆ ಒತ್ತಾಯ ಕೇಳಿಬರುತ್ತಿದೆ.

Ceasefire violation by Pakistan this morning in Krishna Ghati sector

ಭಾರತ ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಭಾರತದ ಎಲ್ಲಾ ವಿಮಾನ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಲವು ವಿಮಾನ ಹಾರಾಟಗಳನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+